ಆರ್.ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಮಪತ್ರ ತಿರಸ್ಕರಿಸುವಂತೆ ಆಗ್ರಹ: ಕಾಂಗ್ರೆಸ್, ಜೆಡಿಎಸ್ ಪ್ರತ್ಯೇಕ ದೂರು…

ಬೆಂಗಳೂರು,ಅಕ್ಟೋಬರ್,17,2020(www.justkannada.in): ಆರ್.ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಸಲ್ಲಿಸಿರುವ ಪ್ರಮಾಣ ಪತ್ರ ಕ್ರಮಬದ್ಧವಾಗಿಲ್ಲ. ಹೀಗಾಗಿ ಮುನಿರತ್ನ ಅವರ ನಾಮಪತ್ರ ತಿರಸ್ಕರಿಸುವಂತೆ ಚುನಾವಣಾಧಿಕಾರಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರತ್ಯೇಕವಾಗಿ ದೂರು ಸಲ್ಲಿಸಿವೆ.jk-logo-justkannada-logo

ಆರ್.ಆರ್ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ನಾಮಪತ್ರಕ್ಕೆ ಇದೀಗ ತಕರಾರು ಕೇಳಿ ಬಂದಿದೆ. ಪ್ರಮಾಣಪತ್ರದಲ್ಲಿ ಕ್ರಿಮಿನಲ್ ಕೇಸ್ ಅನ್ನ ಬಹಿರಂಗಪಡಿಸಿಲ್ಲ. ಪ್ರಮಾಣ ಪತ್ರ ಕ್ರಮಬದ್ಧವಾಗಿಲ್ಲ. ಹೀಗಾಗಿ ನಾಮಪತ್ರ ತಿರಸ್ಕರಿಸಬೇಕು ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಆರ್.ಆರ್ ನಗರ ಚುನಾವಣಾಧಿಕಾರಿಗೆ ದೂರು ನೀಡಿವೆ ಎಂಬ ಮಾಹಿತಿ ಲಭ್ಯವಾಗಿದೆ.rr-nagar-bjp-candidate-muniratna-nomination-reject-congress-jds-complaint

ನವೆಂಬರ್ 3 ರಂದು ಆರ್.ಆರ್ ನಗರ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ, ಜೆಡಿಎಸ್ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ಕಣಕ್ಕಿಳಿದಿದ್ದಾರೆ.

Key words: RR Nagar- BJP candidate- Muniratna- nomination – reject-Congress-JDS- complaint.