Wednesday, August 5, 2026

BDA Apartments

Home Front Page ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಆಟ ನಡೆಯಲ್ಲ: ಗೆಲುವಿನ ಭ್ರಮೆಯಲ್ಲಿ ಬಿಜೆಪಿ -ಮಾಜಿ ಸಿಎಂ ಹೆಚ್.ಡಿ...

ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಆಟ ನಡೆಯಲ್ಲ: ಗೆಲುವಿನ ಭ್ರಮೆಯಲ್ಲಿ ಬಿಜೆಪಿ -ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…

ಬೆಂಗಳೂರು,ಅಕ್ಟೋಬರ್,14,2020(www.justkannada.in):  ಆರ್.ಆರ್ ನಗರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ, ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಆಟ ನಡೆಯಲ್ಲ ಎಂದು ಮಾಜಿ ಸಿಎಂ ಹಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.jk-logo-justkannada-logo

ಆರ್. ಆರ್ ನಗರ ಜೆಡಿಎಸ್ ಅಭ್ಯರ್ಥಿಯಾಗಿ ವಿ.ಕೃಷ್ಣಮೂರ್ತಿ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಮಾಜಿ ಸಿಎಂ ಹಚ್.ಡಿ ಕುಮಾರಸ್ವಾಮಿ, ಈ ಬಾರಿ ನಾನು ನಿಷ್ಟಾವಂತ ಕಾರ್ಯಕರ್ತನ ಪರ ಇರ್ತೇನೆ. ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಪರ ಪ್ರಚಾರ ಮಾಡುತ್ತೇನೆ. ಈ ಕ್ಷೇತ್ರ ಉಸ್ತುವಾರಿ ನಾನೇ ವಹಿಸಿಕೊಂಡಿದ್ದೇನೆ. ಆರ್,ಆರ್ ನಗರ 2008ರಲ್ಲಿ ರಚನೆಯಾಗಿತ್ತು. ಈವೆರೆಗೆ ಬಿಜೆಪಿ ಒಂದು ಬಾರಿ, ಕಾಂಗ್ರೆಸ್ ಎರಡು ಬಾರಿ ಗೆಲುವು ಸಾಧಿಸಿದೆ ಎಂದರು.rr-nagar-by-election-no-congress-game-bjp-former-cm-hd-kumaraswamy

ಆರ್.ಆರ್ ನಗರದಲ್ಲಿ ಕಾಂಗ್ರೆಸ್ ಆಟ ನಡೆಯಲ್ಲ. ಕಾಂಗ್ರೆಸ್ ನಾಯಕರಿಂದ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ. ಯಾವ ಮುಖ ಇಟ್ಟಿಕೊಂಡು ಮತ ಕೇಳುತ್ತಾರೆ ಎಂದು ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಇದೇ ವೇಳೆ ಬಿಜೆಪಿ ವಿರುದ್ದವೂ ಕಿಡಿಕಾರಿದ ಹೆಚ್.ಡಿ ಕುಮಾರಸ್ವಾಮಿ, ಕೊರೋನಾ ನಿಯಂತ್ರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಬಿಜೆಪಿಯವರು ಗೆಲ್ಲುವ ಭ್ರಮೆಯಲ್ಲಿದ್ದಾರೆ ಎಂದು ಟೀಕಿಸಿದರು.

Key words: RR Nagar-by election- No Congress- game- BJP –former cm-HD Kumaraswamy