ಆರ್.ಆರ್ ನಗರ ಬೈ ಎಲೆಕ್ಷನ್: ‘ಕೈ’ ಅಭ್ಯರ್ಥಿ ಮತ್ತು ಜೆಡಿಎಸ್ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ

0
452

ಬೆಂಗಳೂರು,ಅಕ್ಟೋಬರ್,14,2020(www.justkannada.in):  ಆರ್.ಆರ್ ನಗರ ಉಪಚುನಾವಣಾ ಆಖಾಡ ರಂಗೇರಿದ್ದು ಈ ನಡುವೆ  ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹಾಗೂ ಜೆಡಿಎಸ್ ಅಭ್ಯರ್ಥಿ ವಿ. ಕೃಷ್ಣಮೂರ್ತಿ ಇಂದು ನಾಮಪತ್ರ ಸಲ್ಲಿಸಿದರು.jk-logo-justkannada-logo

ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಇಂದು ಬೆಳಿಗ್ಗೆ 10.30ಕ್ಕೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರಿಂದ ಬಿ ಫಾರಂ ಪಡೆದು ನಂತರ ಆರ್.ಆರ್ ನಗರ ಬಿಬಿಎಂಪಿ ಕಚೇರಿಗೆ ತೆರಳಿ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು, ಕೃಷ್ಣಮೂರ್ತಿ ಅವರಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಾಥ್ ನೀಡಿದರು.

ಇನ್ನು ಕಾಂಗ್ರೆಸ್ ಅಭ್ಯರ್ಥಿ ಹೆಚ್ ಕುಸುಮಾ ಅವರೂ ಸಹ ಆರ್.ಆರ್ ನಗರ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು. ಕುಸುಮಾ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ಸಾಥ್ ನೀಡಿದರು.rr-nagar-by-election-nomination-submission-congress-candidate-jds-candidate

ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಸಹ ಇಂದು ನಾಮಪತ್ರ ಸಲ್ಲಿಸಿದರು. ಡಿಸಿಎಂ ಅಶ್ವಥ್ ನಾರಾಯಣ್ ಸಚಿವರಾದ ಆರ್.ಅಶೋಕ್, ಸುಧಾಕರ್, ಭೈರತಿ ಬಸವರಾಜ್ ಸಾಥ್ ನೀಡಿದರು.

Key words: RR nagar-by Election-Nomination- Submission congress Candidate – JDS Candidate