Saturday, September 19, 2026

BDA Apartments

RSS ಸದಸ್ಯರು ಹಿಂದೂಗಳಲ್ಲ, ಬದಲಿಗೆ ಹಿಂದುತ್ವವಾದಿಗಳು- ಸಚಿವ ಯತೀಂದ್ರ ಸಿದ್ದರ...
Home Front Page RSS ಸದಸ್ಯರು ಹಿಂದೂಗಳಲ್ಲ, ಬದಲಿಗೆ ಹಿಂದುತ್ವವಾದಿಗಳು- ಸಚಿವ ಯತೀಂದ್ರ ಸಿದ್ದರಾಮಯ್ಯ

RSS ಸದಸ್ಯರು ಹಿಂದೂಗಳಲ್ಲ, ಬದಲಿಗೆ ಹಿಂದುತ್ವವಾದಿಗಳು- ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು, ಜೂನ್, 16,2026 (www.justkannada.in):  ಆರ್ ಎಸ್ ಎಸ್ ನೋಂದಣಿ ವಿಚಾರಕ್ಕೆ ಸಂಬಂಧಿಸಿದಂತೆ ಮೋಹನ್ ಭಾಗವತ್ ಅವರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ದಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಯತೀಂದ್ರ ಸಿದ್ದರಾಮಯ್ಯ, ಆರ್‌ಎಸ್‌ಎಸ್‌ ಸದಸ್ಯರು ಹಿಂದುಗಳಲ್ಲ, ಬದಲಿಗೆ ಹಿಂದುತ್ವವಾದಿಗಳು. ಗೃಹ  ಸಚಿವಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ ನೋಂದಣಿಗೆ ಕೇಳಿರುವುದು ಕಾನೂನು ಪ್ರಕಾರ ಸರಿಯಾಗಿದೆ. ಆರ್‌ಎಸ್‌ಎಸ್‌ ಸಾಂಸ್ಕೃತಿಕ ಸಂಘಟನೆ ಎಂದು ಹೇಳಿಕೊಂಡರೂ, ವಾಸ್ತವದಲ್ಲಿ ಅದೊಂದು ರಾಜಕೀಯ ಸಂಘಟನೆ. ಅದು ಪ್ರತಿಯೊಂದು ಚುನಾವಣೆಯಲ್ಲಿಯೂ ಬಿಜೆಪಿ ಪರವಾಗಿ ಕೆಲಸ ಮಾಡುತ್ತದೆ. ಆದ್ದರಿಂದ, ಆರ್‌ಎಸ್‌ಎಸ್‌ ದೇಶದ ಕಾನೂನುಗಳನ್ನು ಪಾಲಿಸಬೇಕು ಮತ್ತು ತಮ್ಮನ್ನು ನೋಂದಾಯಿಸಿಕೊಳ್ಳಬೇಕು ಎಂದು  ತಿಳಿಸಿದ್ದಾರೆ.RSS ಸದಸ್ಯರು ಹಿಂದೂಗಳಲ್ಲ BDA JK_Adv BDA Adv

ಆರ್‌ಎಸ್‌ಎಸ್‌ ಅನ್ನು ಕೇವಲ ಸಾಂಸ್ಕೃತಿಕ ಸಂಘಟನೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ಬದಲಾಗಿ, ಇದು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುವ ರಾಜಕೀಯ ಸಂಸ್ಥೆಯಾಗಿದೆ. ಧರ್ಮದ ಹೆಸರಿನಲ್ಲಿ ಏನು ಬೇಕಾದರೂ ಮಾಡುವಂತಿಲ್ಲ. ಆರ್‌ಎಸ್‌ಎಸ್‌ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಗಳನ್ನು ಮತ್ತು ಹಣಕಾಸು ವ್ಯವಹಾರಗಳನ್ನು ಹೊಂದಿದೆ. ಈ ಆರ್ಥಿಕ ವ್ಯವಹಾರಗಳಿಗೆ ಲೆಕ್ಕಪತ್ರವನ್ನು ನೀಡಬೇಕು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಬದಲಿಗೆ ಹಿಂದುತ್ವವಾದಿಗಳು jk02_new jk02 new

Key words: RSS members, Hindus, Hindutva, Minister, Yatindra Siddaramaiah