ಹುಬ್ಬಳ್ಳಿ,ಅಕ್ಟೋಬರ್,18,2025 (www.justkannada.in): ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ವಿರುದ್ದ ಹುಬ್ಬಳ್ಳಿಯಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿಯ ಕೋಟಿ ಲಿಂಗೇಶ್ವರ ನಗರದಲ್ಲಿ ಆರ್ ಎಸ್ ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯುವಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದರು. ಈ ವೇಳೆ 30 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರ್ ಎಸ್ ಎಸ್ ಬಗ್ಗೆ ಟೀಕೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಬೆದರಿಕೆ ಕರೆ ಬಂದಿತ್ತು. ಈ ಸಂಬಂಧ ಈಗಾಗಲೇ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ವಿರುದ್ದ ಕಾಂಗ್ರೆಸ್ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ.
Key words: Protest, RSS, office, Congress workers, custody , police