Wednesday, July 29, 2026

BDA Apartments

Home Front Page ವಿದೇಶದಿಂದ ಬರುವ ಪ್ರಯಾಣಿಕರಿಗೆ RT-PCR ಟೆಸ್ಟ್ ಕಡ್ಡಾಯ- ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ.

ವಿದೇಶದಿಂದ ಬರುವ ಪ್ರಯಾಣಿಕರಿಗೆ RT-PCR ಟೆಸ್ಟ್ ಕಡ್ಡಾಯ- ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ.

ನವದೆಹಲಿ,ಡಿಸೆಂಬರ್,24,2022(www.justkannada.in):   ಭಾರತಕ್ಕೆ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್  ಟೆಸ್ಟ್ ಕಡ್ಡಾಯ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ, ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್‌ಕಾಂಗ್‌, ಥೈಲ್ಯಾಂಡ್‌  ಈ ಐದು ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ  RT-PCR ಟೆಸ್ಟ್ ಕಡ್ಡಾಯ. ಕೋವಿಡ್‌ ಲಕ್ಷಣಗಳು ಕಂಡುಬಂದರೆ ಕೂಡಲೇ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ಚೀನಾ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು  ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕಣ್ಗಾವಲು ಹೆಚ್ಚಿಸಲು ಹಾಗೂ ಲಸಿಕೀಕರಣಕ್ಕೆ ಒತ್ತು ನೀಡಲು ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.

Key words: RT-PCR- test – mandatory -travelers -coming –abroad