Saturday, August 15, 2026

BDA Apartments

Home Front Page ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್, ಥೈಲ್ಯಾಂಡ್, ಸಿಂಗಾಪುರದಿಂದ ಬರುವವರಿಗೆ RTPCR ಕಡ್ಡಾಯ

ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್, ಥೈಲ್ಯಾಂಡ್, ಸಿಂಗಾಪುರದಿಂದ ಬರುವವರಿಗೆ RTPCR ಕಡ್ಡಾಯ

ಬೆಂಗಳೂರು, ಜನವರಿ 01, 2023 (www.justkannada.in): ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್ ಕಾಂಗ್, ಥೈಲ್ಯಾಂಡ್ ಮತ್ತು ಸಿಂಗಾಪುರದಿಂದ ಆಗಮಿಸುವ ಪ್ರಯಾಣಿಕರಿಗೆ ಇಂದಿನಿಂದ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.

ವಿಶ್ವದಾದ್ಯಂತ ವ್ಯಾಪಕವಾಗಿ ಹೆಚ್ಚುತ್ತಿರುವುದರಿಂದ ಸರಕಾರ ಈ ನಿರ್ಧಾರ ಕೈಗೊಂಡಿದೆ.

ಚೀನಾ, ಹಾಂಗ್ ಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ ಮತ್ತು ಥೈಲ್ಯಾಂಡ್ ದೇಶಗಳಲ್ಲಿ ಕೋರೋನಾ ಹೆಚ್ಚಾಗಿದೆ. ಹೀಗಾಗಿ  ಈ ದೇಶಗಳಿಂದ ಭಾರತಕ್ಕೆ ಪ್ರಯಾಣಿಸುವವರಿಗೆ ಈ ಆದೇಶ ಅನ್ವಯವಾಗಲಿದೆ.

ತಮ್ಮ ದೇಶದಲ್ಲಿ ಪ್ರಯಾಣಿಸುವ ಮುನ್ನ ಮೊದಲು ‘ಏರ್ ಸುವಿಧಾ’ ಪೋರ್ಟಲ್ ನೆಗಟಿವ್ ವರದಿಯನ್ನು ಕಡ್ಡಾಯವಾಗಿ ಹಾಕಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.