ಗ್ರಾಮೀಣ ನೀರು ಮತ್ತು ನೈರ್ಮಲ್ಯ ಸಪ್ತಾಹ ಕಾರ್ಯಕ್ರಮ : ಮೈಸೂರು ಡಿಸಿ ಅಭಿರಾಮ್ ಜಿ ಶಂಕರ್ ಸೇರಿ ಹಲವು ಅಧಿಕಾರಿಗಳು ಭಾಗಿ…

ಮೈಸೂರು,ಜು,30,2020(www.justkannada.in):  ಗ್ರಾಮೀಣ ನೀರು ಮತ್ತು ನೈರ್ಮಲ್ಯ ಕುರಿತು ಅರಿವು ಮೂಡಿಸುವ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಸಪ್ತಾಹ ಕಾರ್ಯಕ್ರಮವನ್ನ ಮೈಸೂರಿನಲ್ಲಿ ಆಯೋಜಿಸಲಾಗಿತ್ತು.jk-logo-justkannada-logo

ಮೈಸೂರು ಜಿಲ್ಲಾಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್, ಜಿಪಂ ಸಿಇಒ, ಜಿಪಂ ಅಧ್ಯಕ್ಷೆ ಪರಿಮಳಾ ಶಾಮ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.rural-water-supply-awareness-program-mysore-dc-abhiram-g-shankar

ಕಾರ್ಯಕ್ರಮದಲ್ಲಿ ಮಾತನಾಡಿದ ಉಸ್ತುವಾರಿ ಕಾರ್ಯದರ್ಶಿ ಜಯರಾಮ್, ಗ್ರಾಮೀಣ ನೀರು ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಅಧಿಕಾರಿಗಳ ಪಾತ್ರ ಬಹಳ ಮುಖ್ಯ. ನೈರ್ಮಲ್ಯ ಕುರಿತು ಹೆಚ್ಚಿನ ಜವಾಬ್ದಾರಿ ತೆಗೆದುಕೊಳ್ಳಬೇಕಿದೆ. ನೈರ್ಮಲ್ಯ ಕುರಿತು ಗ್ರಾಮೀಣ ಭಾಗದ ಜನರಲ್ಲಿ ಹೆಚ್ವಿನ ಅರಿವು ಮೂಡಿಸಬೇಕಾದ ಅಗತ್ಯ ಇದೆ. ಜನರ ಯಾವ ಭಾಷೆಯಲ್ಲಿ ಹೇಳಿದರೆ ಅರ್ಥವಾಗುತ್ತದೋ ಅದೇ ಭಾಷೆಯಲ್ಲಿ ಹೇಳಬೇಕು. ಈ ಆಂದೋಲನ ಯಶಸ್ವಿಯಾಗಬೇಕು. ಸ್ವಯಂ ಸೇವಕರು, ಸ್ಥಳೀಯ ಸಂಘಸಂಸ್ಥೆಗಳ ನೆರವು ಪಡೆದುಕೊಂಡು ಕಾರ್ಯಕ್ರಮ ಯಶಸ್ವಿ ಗೊಳಿಸವಂತೆ ಕರೆ ನೀಡಿದರು.

Key words: Rural Water – Supply – Awareness-Program-Mysore DC- Abhiram G Shankar