ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಕನ್ನಡ ಸಾಹಿತ್ಯ ಕಂಡ ಮೇರು ಲೇಖಕ ಎಸ್.ಎಲ್ ಭೈರಪ್ಪ ಇಂದು ಹೃದಯಾಘಾತದಿಂದ ನಿಧನರಾಗಿದ್ದು ನಾಳೆ ಬೆಂಗಳೂರು ಮತ್ತು ಮೈಸೂರಿನಲ್ಲಿ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ನಾಳೆ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಎಸ್ ಎಲ್ ಭೈರಪ್ಪ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗುತ್ತದೆ. ನಂತರೆ ನಾಳೆ ಮಧ್ಯಾಹ್ನ ಮೈಸೂರಿಗೆ ಪಾರ್ಥೀವ ಶರೀರ ರವಾನೆಯಾಗಲಿದ್ದು ಸಂಜೆ ಕಲಾಮಂದಿರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಶುಕ್ರವಾರ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಹೇಳಲಾಗುತ್ತಿದೆ.
Key words: S.L. Bhairappa, tomorrow, Funeral ,Friday