ಮೈಸೂರು,ಸೆಪ್ಟಂಬರ್,26,2025 (www.justkannada.in): ಅನಾರೋಗ್ಯದಿಂದ ನಿಧನರಾದ ನಾಡಿನ ಖ್ಯಾತ ಸಾಹಿತಿ, ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಎಸ್.ಎಲ್ ಭೈರಪ್ಪ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಚಿತಾಗಾರದಲ್ಲಿ ನೆರವೇರಿತು.
ಸೆಪ್ಟಂಬರ್ 24 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದ ಸಾಹಿತಿ ಎಸ್.ಎಲ್ ಭೈರಪ್ಪ ಅವರ ಪಾರ್ಥೀವ ಶರೀರವನ್ನ ನಿನ್ನೆ ಮಧ್ಯಾಹ್ನ ಮೈಸೂರಿಗೆ ತಂದು ಸಂಜೆವರೆಗೆ ಕಲಾಮಂದಿರದ ಆವರಣದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು.
ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಸಾಹಿತಿ ಎಸ್.ಎಲ್ ಭೈರಪ್ಪನವರ ಅಂತ್ಯಕ್ರಿಯೆ ಬ್ರಾಹ್ಮಣ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಎಸ್.ಎಲ್ ಭೈರಪ್ಪ ಅವರ ಚಿತೆಗೆ ಪುತ್ರರು ಲೇಖಕಿ ಸಹನಾ ವಿಜಯ್ ಕುಮಾರ್ ಅಗ್ನಿಸ್ಪರ್ಶ ಮಾಡಿದರು.
ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಹೆಚ್.ಸಿ ಮಹದೇವಪ್ಪ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸೇರಿ ಶಾಸಕರುಗಳು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.
Key words: Writer, S.L. Bhyrappa, Funeral, Mysore