ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್. ರವಿಕುಮಾರ್ ರಾಜೀನಾಮೆ

ಬೆಂಗಳೂರು,ಸೆಪ್ಟಂಬರ್,5,2025 (www.justkannada.in):  60% ಕಮಿಷನ್ ಆರೋಪ ಹಿನ್ನೆಲೆಯಲ್ಲಿ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್. ರವಿಕುಮಾರ್’ ರಾಜೀನಾಮೆ  ಸಲ್ಲಿಸಿದ್ದಾರೆ.

ಭೋವಿ ಅಭಿವೃದ್ದಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪದ  ಕೇಳಿ ಬಂದ ಹಿನ್ನೆಲೆಯಲ್ಲಿ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಗೆ ಸಿಎಂ ಸಿದ್ಧರಾಮಯ್ಯ ರಾಜೀಮಾಮೆ ನೀಡುವಂತೆ ಸೂಚಿಸಿದ್ದರು.

ಈ ಕುರಿತು ಮಾತನಾಡಿದ್ದ ರವಿಕುಮಾರ್,  ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದರೇ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಈ ಬೆನ್ನಲ್ಲೇ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ.

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿ ಕುಮಾರ್ ಅವರು ನಿಗಮದ ಯೋಜನೆಗಳಡಿ ಸೌಲಭ್ಯ ನೀಡಲು ಫಲಾನುಭವಿಗಳಿಂದ ಶೇ.60ರಷ್ಟ ಲಂಚ ಕೇಳಿದ್ದ ವೀಡಿಯೋ ವೈರಲ್ ಆಗಿತ್ತು. ಈ ವೈರಲ್ ವೀಡಿಯೋ ಗಮನಿಸಿದ ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಸೂಚಿಸಿದ್ದರು.

Key words: S. Ravikumar, chairman , Bhovi Development Corporation, resigns