ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

ಬೆಂಗಳೂರು,ನವೆಂಬರ್,14,2025 (www.justkannada.in): ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ(114)  ಅವರು ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಸಾಲುಮರದ ತಿಮ್ಮಕ್ಕ ಅವರು ವಿಧಿವಶರಾಗಿದ್ದಾರೆ. ಉಸಿರಾಟ ಸಮಸ್ಯೆಯಿದ ಸಾಲುಮರದ ತಿಮ್ಮಕ್ಕ ಅವರು  ಆಸ್ಪತ್ರೆಗ ದಾಖಲಾಗಿದ್ದರು. ಆದೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಾಲುಮರದ ತಿಮ್ಮಕ್ಕ ಅವರು 1911 ಜೂನ್ 30 ರಂದು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದರು. ತಂದೆ ಚಿಕ್ಕರಂಗಯ್ಯ; ತಾಯಿ ವಿಜಯಮ್ಮ.  ಇವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರಾದ ಚಿಕ್ಕಯ್ಯ ಎಂಬುವವರನ್ನ ಮದುವೆಯಾಗಿದ್ದರು,. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರು ಎಂದು ಹೇಳಲಾಗಿದೆ.

Key words: Padma Shri ,awardee, Saalumarada Thimmakka, no more