Sunday, August 2, 2026

BDA Apartments

Home Front Page ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿಯ 1 ಟ್ರಿಪ್ ರದ್ದು..

ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿಯ 1 ಟ್ರಿಪ್ ರದ್ದು..

ಮೈಸೂರು,ಅಕ್ಟೋಬರ್,30,2025 (www.justkannada.in): ಬಂಡೀಪುರ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿಯ 1 ಟ್ರಿಪ್ ರದ್ದುಪಡಿಸಲಾಗಿದೆ.

ಈ ಕುರಿತು ಆದೇಶಿಸಿರುವ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ, ಬಂಡೀಪುರ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವನ್ಯಜೀವಿಗಳ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಫಾರಿಯ ಟ್ರಿಪ್ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ರಾತ್ರಿ 6:00 ಗಂಟೆಯ ನಂತರವೂ ಕಾಡಿನಲ್ಲಿ ಸಫಾರಿ ವಾಹನಗಳು ಸಂಚರಿಸುತ್ತಿವೆ. ವಾಹನದ ಬೆಳಕು ಮತ್ತು ಶಬ್ದದಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬಂದು ಉಪಟಳ ನೀಡುತ್ತಿವೆ ಎಂದು ವಿವಿಧ ರೈತ ಸಂಘಟನೆಗಳು ಆರೋಪಿಸಿ, ಕೂಡಲೇ ಸಫಾರಿ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

ಸಫಾರಿಯು ಕಾಡಿನ ಬಗ್ಗೆ, ವನ್ಯಜೀವಿಗಳ ಬಗ್ಗೆ ಪರಿಸರ ಆಸಕ್ತರಿಗೆ ಶಿಕ್ಷಣವೂ ಆಗಿದೆ. ಹಲವರಿಗೆ ಜೀವನೋಪಾಯವೂ ಆಗಿದೆ. ಈ ನಿಟ್ಟಿನಲ್ಲಿ ಹಾಲಿ ಇರುವ ಸಫಾರಿಯ ಟ್ರಿಪ್ ಗಳ ಪೈಕಿ 1 ಟ್ರಿಪ್ ಕಡಿತಗೊಳಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅಂತೆಯೇ ಸಫಾರಿಯ ಸಂಜೆಯ ಒಂದು ಟ್ರಿಪ್ ಕಡಿತಗೊಳಿಸಲಾಗಿದೆ.

Key words:  safari , 1trip ,cancelled, Bandipur, Nagarhole