“ಕ್ಷುಲ್ಲಕ ಕಾರಣ, ಅಣ್ಣನ ಮಗನಿಂದಲೇ ಚಿಕ್ಕಪ್ಪನ ಕೊಲೆ”

ಬೆಂಗಳೂರು,ಏಪ್ರಿಲ್,17,2021(www.justkannada.in) :  ಕ್ಷುಲ್ಲಕ ಕಾರಣಕ್ಕೆ ಅಣ್ಣನ ಮಗ ಚಿಕ್ಕಪ್ಪನನ್ನು ಕೊಲೆ ಮಾಡಿದ್ದಾನೆ.by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappaನಂಜನಗೂಡು ತಾಲೂಕು ಆಲಂಬೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದ ಲಕ್ಷ್ಮಣ (50) ಕೊಲೆಯಾದ ದುರ್ದೈವಿಯಾಗಿದ್ದಾರೆ. 1 ಗುಂಟೆ ಜಮೀನಿನ ಹಣಕಾಸು ವಿಚಾರದಲ್ಲಿ ತಕರಾರು ನಡದಿದೆ. ಈ ಸಂದರ್ಭ ಅಣ್ಣನ ಮಗ ಚಿಕ್ಕಪ್ಪನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಮೃತ ವ್ಯಕ್ತಿಯ ಅಣ್ಣ ರಾಜು ಮಗ ಸಿದ್ದರಾಜು ಆರೋಪಿಯಾಗಿದ್ದು, ಘಟನೆ ಬಳಿಕ ಆರೋಪಿ ಸಿದ್ದರಾಜು ನಾಪತ್ತೆಯಾಗಿದ್ದಾನೆ. ಮೃತನ ಮಗಳು ಚೈತ್ರಾ ಪೊಲೀಸರಿಗೆ ದೂರು ನೀಡಿದ್ದು, ಶವಪರೀಕ್ಷೆಗಾಗಿ ಮೃತದೇಹವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ  ರವಾನೆ ಮಾಡಲಾಗಿದೆ.

sake-trivial reason-Brother-son-Uncle-Murder 

ಸ್ಥಳಕ್ಕೆ ಡಿವೈಎಸ್ಪಿ ಗೋವಿಂದರಾಜು, ವೃತ್ತನಿರೀಕ್ಷಕ ಲಕ್ಷ್ಮಿಕಾಂತ ತಳವಾರ್, ಬಿಳಿಗೆರೆ ಠಾಣೆ ಪಿಎಸ್ಐ ಭೇಟಿ ನೀಡಿ ಮಹಜರು ನಡೆಸಿದ್ದಾರೆ.

key words : sake-trivial reason-Brother-son-Uncle-Murder