ದುನಿಯಾ ‘ಸಲಗ’ ಆಡೀಯೋ ಲಾಂಚ್ ಮಾಡಲು ಬರ್ತಿದ್ದಾರೆ ಹ್ಯಾಟ್ರಿಕ್ ಹೀರೋ !

ಬೆಂಗಳೂರು, ಡಿಸೆಂಬರ್ 28, 2019 (www.justkannada.in): ದುನಿಯಾ ವಿಜಯ್ ನಿರ್ದೇಶನದ ಜೊತೆಗೆ ನಾಯಕರಾಗಿಯೂ ನಟಿಸುತ್ತಿರುವ ಸಲಗ ಚಿತ್ರದ ಆಡಿಯೋ ಜನವರಿ 6 ರಂದು ಬಿಡುಗಡೆಯಾಗಲಿದೆ.

ಕಾರ್ಯಕ್ರಮದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಲಗ ಚಿತ್ರದ ಚಿತ್ರೀಕರಣ ಉತ್ತಮವಾಗಿ ಸಾಗುತ್ತಿದ್ದು, ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯದ ಚಿತ್ರೀಕರಣವನ್ನು ಇತ್ತೀಚೆಗಷ್ಟೇ ಚಿತ್ರತಂಡ ಇತಿಹಾಸ ಪ್ರಸಿದ್ಧ ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ನಡೆಸಿತ್ತು.

ಇದೀಗ ಚಿತ್ರದ ಚಿತ್ರೀಕರಣ ಕಡೆಯ ಹಂತದಲ್ಲಿದ್ದು, ಚಿತ್ರ ತಂಡ ಸಂತಸ ವ್ಯಕ್ತಪಡಿಸಿದೆ. ಸಲಗ ದುನಿಯಾ ವಿಜಯ್ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸಿನಿಮಾವಾಗಿದೆ.

ಚಿತ್ರದಲ್ಲಿ ದುನಿಯಾ ವಿಜಯ್, ಡಾಲಿ ಧನಂಜಯ್, ಸಂಜನಾ ಆನಂದ್, ಕಾಕ್ರೋಚ್ ಖ್ಯಾತಿಯ ಸುಧೀ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ.