ರಾಜ್ಯ ‘ಕೈ’ ಸರ್ಕಾರದ ಹೊಸ ಘೋಷಣೆ: ನೌಕರರ ಸಂಬಳಕ್ಕಿಲ್ಲ ಗ್ಯಾರಂಟಿ. ಇದು ಉಚಿತ, ಖಚಿತ, ನಿಶ್ಚಿತ- ಬಿಜೆಪಿ ವ್ಯಂಗ್ಯ.

ಬೆಂಗಳೂರು,ಆಗಸ್ಟ್,12,2023(www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಕಮಿಷನ್ ಆರೋಪ  ಮಾಡಿದ್ದ ಬಿಜೆಪಿ ಇದೀಗ ಸರ್ಕಾರಿ ನೌಕರರಿಗೆ ಸಂಬಳ ವಿಳಂಬ ವಿಚಾರ ಕುರಿತು ಟ್ವಿಟ್ಟರ್ ನಲ್ಲಿ ಪ್ರಸ್ತಾಪಿಸಿ ಚಾಟಿ ಬೀಸಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ,  ರಾಜ್ಯದಲ್ಲಿ  ಕಾಂಗ್ರೆಸ್ ಸರ್ಕಾರದ ಹೊಸ ಘೋಷಣೆ. ನೌಕರರ ಸಂಬಳಕ್ಕಿಲ್ಲ ಗ್ಯಾರಂಟಿ. ಇದು ಉಚಿತ, ಖಚಿತ, ನಿಶ್ಚಿತ..!

BMTC ನೌಕರರಿಗೆ ತಿಂಗಳು ಮುಗಿದು ಎರಡು ವಾರಗಳಾದರೂ ಸಂಬಳ ಕೈ ಸೇರಿಲ್ಲ. KSRTC ನೌಕರರು ಸಂಬಳವಿಲ್ಲದೆ ಡಿಪೋ ಬಿಟ್ಟು ಮನೆಗೆ ಹೋಗುತ್ತಿಲ್ಲ. ಮೂರು ತಿಂಗಳು ಕಳೆದರೂ ಅತಿಥಿ ಉಪನ್ಯಾಸಕರು ಸಂಬಳವನ್ನೇ ಕಂಡಿಲ್ಲ. ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳಿಗೂ ಸಂಬಳ ಸಿಕ್ಕಿಲ್ಲ. ಸರ್ಕಾರಿ ಶಾಲಾ ಶಿಕ್ಷಕರಿಗೂ ತಿಂಗಳಾದರೂ ಖಾತೆಗೆ ಜಮೆ ಆಗದ ಸಂಬಳ. ಗುತ್ತಿಗೆ ಆಧಾರದ ಸರ್ಕಾರಿ ನೌಕರರಿಗೆ ತಲುಪಿಲ್ಲ ಸಂಬಳ..!

ಇನ್ನೂ ಹಲವು ಇಲಾಖೆಗಳ ಸರ್ಕಾರಿ ನೌಕರರು ಸಂಬಳ ಸಿಗದೆ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ರಾಜ್ಯದ ಜನರ ಕಿವಿ ಮೇಲೆ ಹೂ ಇಟ್ಟ ಸಿದ್ಧರಾಮಯ್ಯ ಅವರ ಸರ್ಕಾರ, ಗ್ಯಾರಂಟಿಯ ಹಣ ಕೊಡುವುದು ಹಾಗಿರಲಿ, ಮೊದಲು ನೌಕರರ ಸಂಬಳವನ್ನು ಜಾರಿಗೊಳಿಸಿ ಸ್ವಾಮಿ ಎಂದು ಸರ್ಕಾರಕ್ಕೆ ಚಾಟಿ ಬೀಸಿದೆ.

Key words: Salary – employees – Congress Govt-BJP-tweet