ಶೇ.50%ರ ರಿಯಾಯಿತಿ ದರಗಳಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳ ಮಾರಾಟ…

ಬೆಂಗಳೂರು,ಡಿಸೆಂಬರ್,30,2020(www.justkannada.in): ಗಣರಾಜ್ಯೋತ್ಸವದ ಅಂಗವಾಗಿ 2021 ರ ಜನವರಿ ತಿಂಗಳ ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನ ಶೇ.50% ರ  ರಿಯಾಯಿತಿ ದರಗಳಲ್ಲಿ ಮಾರಾಟ ಮಾಡುವುದಾಗಿ ಆಡಳಿತಾಧಿಕಾರಿ ಕೆ.ಬಿ ಕಿರಣ್ ಸಿಂಗ್ ತಿಳಿಸಿದ್ದಾರೆ.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ ನಲ್ಲಿ ಕೂಡ  ಈ ಶೇ.50% ರಿಯಾಯಿತಿ ಲಭ್ಯವಿದೆ.sale-books-kannada-book-authority-discount-rates-50

ಇದಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದಲ್ಲಿಯೂ ಕೂಡ ಶೇ. 50%ರ ರಿಯಾಯಿತಿಯಲ್ಲಿ ಲಭ್ಯವಿರಲಿದೆ. ಪ್ರಾಧಿಕಾರದ ವೆಬ್ ಸೈಟ್ www.kannadapustakapradhikara.com ದಲ್ಲಿ  ಪುಸ್ತಕಗಳು ಲಭ್ಯವಿರಲಿದ್ದು ವಿಭಾಗದಲ್ಲಿ ಆಯ್ಕೆ ಮಾಡಿ ಆನ್ ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನ ಅಂಚೆ ಮೂಲಕ ಪಡೆಯಬಹುದಾಗಿದೆ ಎಂದು ಆಡಳಿತಾಧಿಕಾರಿ ಕೆ.ಬಿ ಕಿರಣ್ ಸಿಂಗ್ ತಿಳಿಸಿದ್ದಾರೆ.

Key words: Sale – books – Kannada Book Authority – discount rates – 50%.