ಜುಲೈ 1 ರಿಂದ ಅಮೆಜಾನ್ ಪ್ರೈಮ್’ನಲ್ಲಿ ‘ಸಾಮ್ರಾಟ್ ಪೃಥ್ವಿರಾಜ್’

ಬೆಂಗಳೂರು, ಜೂನ್ 29, 2022 (www.justkannada.in): ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ‘ಸಾಮ್ರಾಟ್ ಪೃಥ್ವಿರಾಜ್’  OTT ಸ್ಟ್ರೀಮಿಂಗ್ ಹಕ್ಕುಗಳನ್ನು ಅಮೆಜಾನ್ ಪ್ರೈಮ್ ಪಡೆದುಕೊಂಡಿದೆ.

ಹಿಂದೂಸ್ತಾನದ ಸಿಂಹ ಎಂದೇ ಖ್ಯಾತಿ ಪಡೆದಿರುವ ‘ಸಾಮ್ರಾಟ್ ಪೃಥ್ವಿರಾಜ್ ಚೌಹಾಣ್’ ಅವರ ಜೀವನ ಕಥೆಯ ಮೇಲೆ ‘ಸಾಮ್ರಾಟ್ ಪೃಥ್ವಿರಾಜ್’ ಎಂಬ ಐತಿಹಾಸಿಕ ಸಿನಿಮಾ ತಯಾರಾಗಿದೆ.

ಶ್ ರಾಜ್ ಫಿಲಂಸ್ ನಿರ್ಮಾಣದ ಈ ಚಿತ್ರವನ್ನು ಚಂದ್ರಪ್ರಕಾಶ್ ದ್ವಿವೇದಿ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಜುಲೈ 1 ರಿಂದ ಅಮೆಜಾನ್ ಪ್ರೈಮ್ ವಿಡಿಯೋ ಮೂಲಕ ಈ ಐತಿಹಾಸಿಕ ಕಥೆಯನ್ನು ಪ್ರತಿ ಮನೆಗೂ ಪ್ರಸ್ತುತಪಡಿಸಲು ಸಂತೋಷವಾಗಿದೆ ಎಂದು ಅಕ್ಷಯ್ ಕುಮಾರ್ ಹೇಳಿದ್ದಾರೆ.