ಕರ್ನಾಟಕ ಚಲನಚಿತ್ರ ಕಪ್: ಮೈಸೂರಿನಲ್ಲಿ ಸ್ಯಾಂಡಲ್ ವುಡ್ ಸಿನಿತಾರೆಯರ ‘ಕ್ರಿಕೆಟ್’ ಕಾದಾಟ !

ಬೆಂಗಳೂರು, ಜುಲೈ 30, 2019 (www.justkannada.in): ಕರ್ನಾಟಕ ಚಲನಚಿತ್ರ ಕಪ್ ಈ ಬಾರಿ ಮೈಸೂರಿನಲ್ಲಿ ನಡೆಯಲಿದೆ.

ಮೈಸೂರಿನಲ್ಲಿ ಸೆಪ್ಟೆಂಬರ್ 6, 7 ಮತ್ತು 8 ರಂದು ಕೆಸಿಸಿ ಮೂರನೇ ಆವೃತ್ತಿಯ ಪಂದ್ಯಗಳು ನಡೆಯಲಿವೆ ಎಂದು ನಟ ಕಿಚ್ಚ ಸುದೀಪ್ ಘೋಷಿಸಿದ್ದಾರೆ.

10 ಓವರ್ ಗಳ ಪಂದ್ಯದಲ್ಲಿ ಈ ಬಾರಿ ಪ್ರತೀ ತಂಡ ಒಟ್ಟು ಐದು ಪಂದ್ಯಗಳನ್ನು ಆಡಲಿದ್ದು, ಬಳಿಕ ಫೈನಲ್ ಪಂದ್ಯ ನಡೆಯಲಿದೆ. ಸ್ಯಾಂಡಲ್ ವುಡ್ ನ ಸೆಲೆಬ್ರಿಟಿಯರ ಒಟ್ಟು ಆರು ತಂಡಗಳು ಟೂರ್ನಮೆಂಟ್ ನಲ್ಲಿ ಭಾಗವಹಿಸಲಿವೆ.

ಕಳೆದ ಬಾರಿ ಕಿಚ್ಚ ಸುದೀಪ್, ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ಗೋಲ್ಡನ್ ‍ಸ್ಟಾರ್ ಗಣೇಶ್, ರಾಕಿಂಗ್ ಸ್ಟಾರ್ ಯಶ್ ಮತ್ತು ರಿಯಲ್ ಸ್ಟಾರ್ ಉಪೇಂದ್ರ ನೇತೃತ್ವದ ಆರು ತಂಡಗಳು ಟೂರ್ನಮೆಂಟ್ ನಲ್ಲಿ ಭಾಗವಹಿಸಿದ್ದವು.