Tuesday, October 6, 2026

BDA Apartments

ನಾಡು ಕಂಡ ಶ್ರೇಷ್ಠ ಮುತ್ಸದ್ಧಿ ರಾಜಕಾರಣಿ ಎಸ್.ಎಂ ಕೃಷ್ಣ: ಅವರ ಆಡಳಿತ ವೈಖರಿ ರ...
Home Front Page ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲ ನಂಟು ಆರೋಪ-ನಿರ್ದೇಶಕ ಇಂದ್ರಜಿತ್ ಲಂಕೇಶ್ ರ ವಿಚಾರಣೆ- ಗೃಹ...

ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲ ನಂಟು ಆರೋಪ-ನಿರ್ದೇಶಕ ಇಂದ್ರಜಿತ್ ಲಂಕೇಶ್ ರ ವಿಚಾರಣೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ..

ಬೆಂಗಳೂರು,ಆಗಸ್ಟ್ 31,2020(www.justkannada.in): ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲ ನಂಟು ಇರುವ ಬಗ್ಗೆ  ಆರೋಪ ಮಾಡಲಾಗಿದ್ದು ಈ ಸಂಬಂಧ ನಿರ್ದೇಶಕ ಇಂದ್ರಜಿತ್ ಲಂಕೇಶ್ ರನ್ನ ವಿಚಾರಣೆ ನಡೆಸಿ ಮಾಹಿತಿ ಸಂಗ್ರಹಿಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.jk-logo-justkannada-logo

ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಇಂದ್ರಜಿತ್ ಲಂಕೇಶ್, ಡ್ರಗ್ಸ್ ದಂಧೆ ಸಂಬಂಧ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದೇನೆ. ಅಧಿಕಾರಿಗಳ ಜತೆ ಚರ್ಚಿಸುತ್ತೇನೆ. ಇಂದ್ರಜಿತ್ ಲಂಕೇಶ್ ರನ್ನ ವಿಚಾರಣೆಗೆ ಕರೆದಿದ್ದೇವೆ. ಅವರು ನೀಡುವ ಮಾಹಿತಿ ಪಡೆಯುತ್ತೇವೆ.  ನಮ್ಮ ಬಳಿಯೂ ಕೆಲವು ಮಾಹಿತಿ ಇದೆ. ಎಲ್ಲವನ್ನೂ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದೇನೆ ಎಂದರು.sandalwood-drug-abuse-director-indrajit-lankesh-inquiry-home-minister-basavaraja-bommai

ಹಾಗೆಯೇ  ಡ್ರಗ್ಸ್ ಜಾಲ ನಿಯಂತ್ರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಡ್ರಗ್ಸ್ ವಿರುದ್ದ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತದೆ ಎಂದು ಸಚಿವ  ಬಸವರಾಜ ಬೊಮ್ಮಾಯಿ ತಿಳಿಸಿದರು.

Key words: Sandalwood – drug- abuse-Director- Indrajit Lankesh-inquiry – Home Minister -Basavaraja Bommai.