ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣ:  ಆ್ಯಂಕರ್ ಅನುಶ್ರೀಗೆ ಸಿಸಿಬಿಯಿಂದ ನೋಟಿಸ್..

ಬೆಂಗಳೂರು,ಸೆಪ್ಟಂಬರ್,24,2020(www.justkannada.in): ಡ್ರಗ್ಸ್ ದಂಧೆಗೆ  ಸ್ಯಾಂಡಲ್ ವುಡ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಖ್ಯಾತ ನಿರೂಪಕಿ ಅನುಶ್ರೀ ಅವರಿಗೂ ಸಂಕಷ್ಟ ಎದುರಾಗಿದೆ.jk-logo-justkannada-logo

ಹೌದು ಆ್ಯಂಕರ್ ಅನುಶ್ರೀ ಅವರಿಗೆ ವಾಟ್ಸಪ್ ಮೂಲಕ ಮಂಗಳೂರು ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಿಶೋರ್ ಶೆಟ್ಟಿ ಆಪ್ತ ತರುಣ್ ನೀಡಿದ್ದ ಮಾಹಿತಿ ಆಧಾರದ ಮೇಲೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಡ್ಯಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ಅವರನ್ನು ಬಂಧಿಸಿದ್ದರು. ತರುಣ್ ಅನ್ನು ತೀವ್ರ ವಿಚಾರಣೆ  ನಡೆಸಿದ್ದರು. ತರುಣ್ ನೀಡಿರುವ ಮಾಹಿತಿ ಮೇರೆಗೆ ಸಿಸಿಬಿ ನೋಟೀಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ. Sandalwood - drug – case-Notice -CCB – Anchor- Anushree.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಆ್ಯಂಕರ್ ಅನುಶ್ರೀ, ‘ನನಗೆ ಇದುವರೆಗೂ ಯಾವುದೇ ನೋಟಿಸ್​ ಬಂದಿಲ್ಲ. ಯಾವುದೇ ನೋಟಿಸ್ ರಿಶೀವ್ ಮಾಡಿಲ್ಲ. ನೋಟಿಸ್ ಬಂದಿದ್ರೆ ನಾನೇ ಹೇಳುತ್ತಿದೆ. ನಾನು ಯಾವುದೇ ತಪ್ಪು ಮಾಡಿಲ್ಲ. ಈ ವಿಷಯ ಕೇಳಿ ನನ್ನ ಮನೆಯವರು ತುಂಬಾ ಭಯಪಟ್ಟಿದ್ದಾರೆ ಎಂದು ಹೇಳಿದ್ದಾರೆ.

Key words: Sandalwood – drug – case-Notice -CCB – Anchor- Anushree.