Friday, July 31, 2026

BDA Apartments

Home Cinema ಧ್ರುವ ಸರ್ಜಾ-ಜೋಗಿ ಪ್ರೇಮ್ ಚಿತ್ರದ ಟೀಸರ್ ರಿಲೀಸ್ ಕಾರ್ಯಕ್ರಮಕ್ಕೆ ಸಂಜಯ್ ದತ್?

ಧ್ರುವ ಸರ್ಜಾ-ಜೋಗಿ ಪ್ರೇಮ್ ಚಿತ್ರದ ಟೀಸರ್ ರಿಲೀಸ್ ಕಾರ್ಯಕ್ರಮಕ್ಕೆ ಸಂಜಯ್ ದತ್?

ಬೆಂಗಳೂರು, ಅಕ್ಟೋಬರ್ 11, 2022 (www.justkannada.in): ಆ್ಯಕ್ಸನ್ ಪ್ರಿನ್ಸ್‌ ಧ್ರುವ ಸರ್ಜಾ ಇದೀಗ ಜೋಗಿ ಪ್ರೇಮ್‌ ಅವರ ಜೊತೆ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ವಿಶೇಷ ಎಂದರೆ ಟೈಟಲ್‌ ಟೀಸರ್‌ ರಿಲೀಸ್‌ಗಾಗಿ ಚಿತ್ರತಂಡ ಸಿದ್ಧತೆ ಆರಂಭಿಸಿದೆ. ಇದಕ್ಕಾಗಿ ಬಾಲಿವುಡ್ ನಟರೊಬ್ಬರನ್ನುಕರೆತರಲು ಪ್ಲಾನ್ ಮಾಡಿಕೊಂಡಿದೆ.

ಪ್ರೇಮ್‌ ಬಾಲಿವುಡ್‌ ನಟ ಸಂಜಯ್‌ ದತ್‌ ಅವರನ್ನು ಭೇಟಿಯಾಗಿದ್ದಾರೆ. ಸಂಜಯ್‌ ದತ್‌ ಅವರ ಜೊತೆಗಿ ಫೋಟೋಗಳನ್ನು ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಹೀಗಾಗಿ ಸಂಜಯ್‌ ದತ್‌ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಬರುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರವೂ ಧ್ರುವ ಸರ್ಜಾ ಹಾಗೂ ಜೋಗಿ ಪ್ರೇಮ್‌ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಹೊಸ ಚಿತ್ರ ಟೈಟಲ್‌ ಟೀಸರ್‌ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.