Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಶಾಸಕ ಸತೀಶ್ ಸೈಲ್ ಗೆ ಜೈಲು ಶಿಕ್ಷೆ: ಲೋಕಾಯುಕ್ತ ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ ಪ್ರತಿಕ್ರಿಯೆ...

ಶಾಸಕ ಸತೀಶ್ ಸೈಲ್ ಗೆ ಜೈಲು ಶಿಕ್ಷೆ: ಲೋಕಾಯುಕ್ತ ನಿವೃತ್ತ ನ್ಯಾ. ಸಂತೋಷ್ ಹೆಗ್ಡೆ ಪ್ರತಿಕ್ರಿಯೆ ಏನು..?

ಬೆಂಗಳೂರು,ಅಕ್ಟೋಬರ್,26,2024 (www.justkannada.in): ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ 7 ವರ್ಷಗಳ ಕಾಲ ಜೈಲು ಶಿಕ್ಷೆ ಪ್ರಕಟವಾಗಿರುವ ಕುರಿತು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಂತೋಷ್ ಹೆಗ್ಡೆ, ಅದಿರು ಅಕ್ರಮ ಸಾಗಾಟ ಪ್ರಕರಣದಲ್ಲಿ ಶಿಕ್ಷೆಯಾಗಿರುವುದು ಉತ್ತಮ ಬೆಳವಣಿಗೆ. ಇದು ನ್ಯಾಯಾಂಗದ ಶಕ್ತಿ ತೋರಿಸದಂತಾಗುತ್ತದೆ. ಶಿಕ್ಷೆಆಗಿರುವುದರಿಂದ ನ್ಯಾಯಾಂಗದ ಮೇಲೆ ಗೌರವ ಬರುತ್ತೆ.  ನ್ಯಾಯಾಂಗದ ಮೇಲೆ ಜನರಿಗೆ ವಿಶ್ವಾಸ ಬಂದಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗೇ ಆಗುತ್ತದೆ ಎಂದರು.

ದೊಡ್ಡ ದೊಡ್ಡ ರಾಜಕಾರಣೀಗಳ ವಿರುದ್ದ ತನಿಖೆ  ವೇಳೆ ಅಡೆತಡೆಯಾಗುತ್ತಿತ್ತು.  ನನ್ನ ಜೊತೆ ಕೆಲಸ ಮಾಡಿದ ಅಧಿಕಾರಿಗಳಿಗೆ ಸಂತೃಪ್ತಿ ಸಿಕ್ಕಂತಾಗಿದೆ. ಅಕ್ರಮದಲ್ಲಿ ಇನ್ನೂ ಹಲವರು ಇದ್ದಾರೆ.  ಅವರಿಗೂ ಶಿಕ್ಷೆಯಾಗಬೇಕು ಎಂದರು.

Key words: Santosh Hegde, reaction, Jail sentence, MLA, Satish Sail