ಸ್ಯಾಂಟ್ರೋ ರವಿ ಪ್ರಕರಣ ಸಿಐಡಿಗೆ ವರ್ಗಾವಣೆ.

ಮೈಸೂರು,ಜನವರಿ,16,2023(www.justkannada.in): ವರ್ಗಾವಣೆ, ವೆಶ್ಯಾವಾಟಿಕೆ ದಂಧೆ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ  ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ಈ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ.  ಮೈಸೂರು ನಗರ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು,  ಈ ಪ್ರಕರಣವನ್ನ ಸಿಐಡಿಗೆ ವರ್ಗಾವಣೆ ಮಾಡುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಸ್ಯಾಂಟ್ರೊ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರದಿಂದ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ  ತಿಳಿಸಿದ್ದಾರೆ. ಡಿಜಿ&ಐಜಿಪಿ ಆದೇಶದಂತೆ ಇಂದು ಸಂಜೆ ಅಥವಾ ನಾಳೆ ಸಿಐಡಿಗೆ ಅಧಿಕೃತವಾಗಿ ಸ್ಯಾಂಟ್ರೊ ರವಿ ಪ್ರಕರಣ ವರ್ಗಾವಣೆ ಅಗಲಿದೆ.

ಸ್ಯಾಂಟ್ರೋ ರವಿ ವಿರುದ್ಧ  ಪತ್ನಿ ದೂರು ನೀಡಿದ್ದರು. ಪೊಲೀಸ್ ಟ್ರಾನ್ಸ್​ಫರ್​​​ ದಂಧೆ ಸೇರಿ ಹಲವು ಆರೋಪವಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.

Key words: Santro Ravi –case- transferred – CID.