ಮೈಸೂರು ಕೇಂದ್ರ ಕಾರಾಗೃಹದಲ್ಲಿ ಸ್ಯಾಂಟ್ರೊ ರವಿ: 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು, ಜನವರಿ 15, 2023 (www.justkannada.in): ಕೆ. ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೊ ರವಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಎಲ್ಲಾ ಆರೋಪಿಗಳನ್ನು 6ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿತ್ತು. ಎರಡನೇ ಶನಿವಾರ ನ್ಯಾಯಾಲಯದ ಕಲಾಪ ಇಲ್ಲದ ಕಾರಣ ನ್ಯಾಯಾಧೀಶರ ನಿವಾಸಕ್ಕೆ ಕರೆದುಕೊಂಡು ಹೋಗಿ ಹಾಜರು ಪಡಿಸಲಾಗಿತ್ತು.

ಬಿಗಿ ಭದ್ರತೆಯಲ್ಲಿ ಪೊಲೀಸರು ವಾಲ್ಮೀಕಿ ನಗರದ ರಸ್ತೆಯಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಆರೋಪಿಗಳನ್ನು ಕರೆದುಕೊಂಡು ಬಂದಿದ್ದರು. ನ್ಯಾಯಾಧೀಶರು ಎಲ್ಲಾ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪ್ರಕರಣದ ತನಿಖಾಧಿಕಾರಿ ಬಿ. ಎಸ್.‌ ರವಿಶಂಕರ್ ನೇತೃತ್ವದಲ್ಲಿ ಆರೋಪಿಗಳನ್ನು ಜೈಲಿಗೆ ಕಳಿಸಲಾಯಿತು. ಗುಜರಾತ್‌ನಿಂದ ಆರೋಪಿಗಳನ್ನು ಕರೆತಂದ ಬಳಿಕ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು.