ಮಣ್ಣಲ್ಲಿ ಮಣ್ಣಾದ ಸರಳವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ.

ಹುಬ್ಬಳ್ಳಿ,ಜುಲೈ,5,2022(www.justkannada.in): ನಿನ್ನೆ ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಹತ್ಯೆಗೀಡಾದ ಸರಳವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅವರ ಅಂತ್ಯಕ್ರಿಯೆ ಇಂದು ಅವರ ಊರು ಧಾರವಾಡ ಜಿಲ್ಲೆ ಹುಬ್ಬಳ್ಳಿಯ ಸುಳ್ಳ ಗ್ರಾಮದ ಜಮೀನಿನಲ್ಲಿ ನೆರವೇರಿತು.

ಕುಟುಂಬಸ್ಥರು ಮತ್ತು ಭಕ್ತರ ಆಕ್ರಂದನದ ನಡುವೆಯೇ ಚಂದ್ರಶೇಖರ ಗುರೂಜಿ ಅವರ ಅಂತ್ರಕ್ರಿಯೆ ಬುಧವಾರ ಸಂಜೆ ನೆರವೇರಿತು. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಕೊಟ್ರಯ್ಯ ಶಾಸ್ತ್ರಿಗಳ ನೇತೃತ್ವದಲ್ಲಿ ಅಂತ್ಯಕ್ರಿಯೆಯ ವಿಧಿವಿಧಾನ ನಡೆಯಿತು. ಅಣ್ಣನ ಮಗ ಸಂತೋಷ್ ಅಂಗಡಿ ಅಂತಿಮ ವಿಧಿ ವಿದಾನ ನೆರವೇರಿಸಿದರು.

ಇದಕ್ಕೂ ಮುನ್ನ ಕಿಮ್ಸ್​ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದ ಬಳಿಕ ಪಾರ್ಥಿವ ಶರೀರವನ್ನು ಸ್ವಗ್ರಾಮದಲ್ಲಿ ಮೆರವಣಿಗೆ ಮಾಡಲಾಯಿತು. ಕೆಲಕಾಲ ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿತ್ತು. ಅಂತ್ಯಕ್ರಿಯೆಯಲ್ಲಿ ಕುಟುಂಬಸ್ಥರು,ಸ್ನೇಹಿತರು, ಭಕ್ತರು ಭಾಗಿಯಾಗಿದ್ದರು.

Key words: saralavastu-Chandrashekar guruji- funeral-hubli