ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ನಾಳೆ ಬಂದ್: ಹಲವು ಸಂಘಟನೆಗಳಿಂದ ಬೆಂಬಲ ಘೋಷಣೆ…

ಬೆಂಗಳೂರು, ಫೆ, 12,2020(www.justkannada.in): ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ  ನಾಳೆ ಕರೆ ನೀಡಿರುವ ಕರ್ನಾಟಕ ಬಂದ್‌ಗೆ  ಹಲವು ಸಂಘಸಂಘಟನೆಗಳು ಬೆಂಬಲ ಘೋಷಣೆ ಮಾಡಿವೆ.

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಬಂದ್ ಕರೆ ನೀಡಲಾಗಿದೆ ನಾಳೆ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಯಲಿದೆ. ಬಂದ್ ಗೆ  ಓಲಾ ಮತ್ತು ಊಬರ್ ಚಾಲಕರು ಬಂದ್‌ಗೆ ಬೆಂಬಲ ನೀಡಿದ್ದಾರೆ. ಆದ್ದರಿಂದ, ಟ್ಯಾಕ್ಸಿ ಇರುವುದಿಲ್ಲ.  ಬೀದಿ ಬದಿ ವ್ಯಾಪಾರಿಗಳ ಸಂಘಟನೆ, ಅಂಬೇಡ್ಕರ್ ಸೇನೆ, ಜಯಕರ್ನಾಟಕ, ವಿವಿಧ ದಲಿತ ಪರ ಸಂಘಟನೆಗಳು, ಕರ್ನಾಟಕ ಸೇನಾ ಒಕ್ಕೂಟ ಸೇರಿ ಹಲವು ಸಂಘಟನೆಗಳು ಬಂದ್ ಗೆ ಬೆಂಬಲಿಸಿವೆ.

ಹಾಗೆಯೇ ಲಾರಿ ಮಾಲೀಕರ ಸಂಘ, ಓಲಾ ಮತ್ತು ಊಬರ್ ಚಾಲಕರ ಸಂಘ, ಬೀದಿ ವ್ಯಾಪಾರಿಗಳು, ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರೈತ ಸಂಘ, ಆದರ್ಶ ಆಟೋ ಯೂನಿಯನ್, ಪೀಸ್ ಆಟೋ ಯೂನಿಯನ್, ಜೈ ಭಾರತ ಚಾಲಕರ ಸಂಘ, ಸಾರಥಿ ಸೇನೆ ಸೇರಿದಂತೆ 600 ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿವೆ.

ಇನ್ನು ಬ್ಯಾಂಕ್ ನೌಕರರು, ಹೋಟೆಲ್ ಮಾಲೀಕರ ಸಂಘ, ಕೆಎಸ್ ಆರ್ ಟಿಸಿ ನೌಕರರ ಸಂಘ ನೈತಿಕ ಬೆಂಬಲ ಸೂಚಿಸಿವೆ. ಇನ್ನು ನಾಳೆ ಬೆಂಗಳೂರಿನ ಟೌನ್‌ ಹಾಲ್‌ನಿಂದ ಫ್ರೀಡಂ ಪಾರ್ಕ್‌ ತನಕ ವಿವಿಧ ಸಂಘಟನೆಗಳು ಬೃಹತ್ ಪ್ರತಿಭಟನಾ ಜಾಥಾ ನಡೆಸಲಿವೆ.

Key words: Sarojini Mahishi- Report – implement- tomorrow-karnataka bandh