ಬೆಂಗಳೂರು ,ಸೆಪ್ಟಂಬರ್,6,2025 (www.justkannada.in): ಧರ್ಮಸ್ಥಳ ಪ್ರಕರಣದಲ್ಲಿ ಸಂಸದ ಸಸಿಕಾಂತ್ ಸೆಂಥಿಲ್ ಕೈವಾಡ ಇದೆ ಎಂದು ಆರೋಪ ಮಾಡಿದ್ದ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ವಿರುದ್ದ ಸಂಸದ ಸಸಿಕಾಂತ್ ಸೆಂಥಿಲ್ ಇದೀಗ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಸಿಕಾಂತ್ ಸೆಂಥಿಲ್, ನಾನು 10 ವರ್ಷಗಳ ಕಾಲ ಕರ್ನಾಟಕದಲ್ಲಿ ಕೆಲಸ ಮಾಡಿದ್ದೇನೆ. ನನ್ನ ವಿರುದ್ಧ ಆರೋಪ ಮಾಡಿದ ವ್ಯಕ್ತಿ ಯಾರು ಗೊತ್ತಾ? ಕರ್ನಾಟಕದ ಸಂಪತ್ತು ಲೂಟಿ ಹೊಡೆದು 7 ವರ್ಷ ಜೈಲಿನಲ್ಲಿ ಇದ್ದವರು. ಶಾಸಕ ಜನಾರ್ದನ ರೆಡ್ಡಿ ರಾಜ್ಯದ ಸಂಪನ್ಮೂಲಗಳನ್ನು ಲೂಟಿ ಮಾಡಿದ್ದಾರೆ. ಈ ಮೂಲಕ ರಾಷ್ಟ್ರಮಟ್ಟದಲ್ಲಿ ಕರ್ನಾಟಕಕ್ಕೆ ಕೆಟ್ಟ ಇಮೇಜ್ ತಂದಿದ್ದಾರೆ, ಇಂಥವರು ನನ್ನ ಮೇಲೆ ಆರೋಪ ಮಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿಯವರು ತಮ್ಮ ಹೆಸರನ್ನು ಎಳೆದು ತರುತ್ತಿರುವ ಬಗ್ಗೆ ಸ್ಪಷ್ಟೀಕರಣ ಕೋರಿ ನ್ಯಾಯಾಲಯದ ಮುಂದೆ ದೂರು ದಾಖಲಿಸಿದ್ದೇನೆ. ಚೈಲ್ಡಿಶ್ ಗಳಿಗೆ ಉತ್ತರ ಕೊಡಬೇಕಾ ಅಂತ ಇಷ್ಟು ದಿನ ಸುಮ್ಮನಿದ್ದೆ. ಆದರೆ ಈಗ ಪ್ರತಿದಿನ ಒಂದು ಸ್ಟೋರಿ ಬರುತ್ತಿದೆ ಇದು ಸರಿಯಾದ ಸಮಯವೆಂದು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ ಎಂದು ತಿಳಿಸಿದರು.
Key words: Sasikant Senthil, MP, defamation case, against, MLA, Janardhan Reddy