ಅಧಿವೇಶನ ಆರಂಭದಿಂದ ಮುಗಿಯುವವರೆಗೂ ಸರ್ಕಾರದ ವಿರುದ್ಧ ಕಾರ್ಯಕರ್ತರ ಜೊತೆ ಸತ್ಯಾಗ್ರಹ-ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.

ಬೆಂಗಳೂರು,ಜೂನ್,24,2023(www.justkannada.in):  ಗ್ಯಾರಂಟಿ ಯೋಜನೆಗಳ ಜಾರಿಗೆ ಆಗ್ರಹಿಸಿ ರಾಜ್ಯ ವಿಧಾನಸಭೆ ಅಧಿವೇಶನ ಆರಂಭದಿಂದ ಮುಗಿಯುವವರೆಗೂ ಸರ್ಕಾರದ ವಿರುದ್ಧ ಕಾರ್ಯಕರ್ತರ ಜೊತೆ  ಕುಳಿತು ಸತ್ಯಾಗ್ರಹ ಮಾಡುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ರಾಜ್ಯ ಕಾಂಗ್ರೆಸ್ ಸರ್ಕಾರ 15 ಕೆಜಿ ಅಕ್ಕಿ ಕೊಡಬೇಕು. ನಿರುದ್ಯೋಗಿ ಪದವೀಧರ ಬ್ಯಾಂಕ್ ಖಾತೆಗೆ 3,000 ಹಣ ಕೊಡಬೇಕು. ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ​ಗೆ ಪಡೆಯಲು ಅವಕಾಶ ಕೊಡದಂತೆ ನಾವು ಕೆಲಸ ಮಾಡಬೇಕಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಬೇಕಿದೆ ಎಂದರು.

ಅಧಿವೇಶನದ ಆರಂಭದ ದಿನದಿಂದ ನಾನು ಸತ್ಯಾಗ್ರಹ ಮಾಡುತ್ತೇನೆ. ಅಧಿವೇಶನ ಮುಗಿಯೋವರೆಗೂ ಕಾರ್ಯಕರ್ತರ ಜೊತೆ ಸತ್ಯಾಗ್ರಹ ಮಾಡುತ್ತೇನೆ. ವಿಧಾನಸಭೆಯಲ್ಲಿ ನಮ್ಮ ಪಕ್ಷದ ಶಾಸಕರು ಹೋರಾಟ ಮಾಡಲಿದ್ದಾರೆ ಎಂದು ಬಿಎಸ್​ ಯಡಿಯೂರಪ್ಪ ಹೇಳಿದರು.

ಷಡ್ಯಂತರದಿಂದ ಪ್ರಧಾನಿ ಮೋದಿಯವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ. ರಾಜ್ಯದಲ್ಲಿ 25-26 ಲೋಕಸಭಾ ಸ್ಥಾನಗೆಲ್ಲುವ ಮೂಲಕ ಕೊಡುಗೆ ಕೊಡಬೇಕಿದೆ ಎಂದು ಬಿಎಸ್ ವೈ ತಿಳಿಸಿದರು.

Key words: Satyagraha – activists -against – government -former CM -BS Yeddyurappa.