ಸತ್ಯಹರಿಶ್ಚಂದ್ರ ರೀತಿ ಬಿಜೆಪಿ ನಾಯಕರು ಫೋಸ್​ ಕೊಡ್ತಾರೆ-  ಸಚಿವ ರಾಮಲಿಂಗರೆಡ್ಡಿ ವಾಗ್ದಾಳಿ.

ಬೆಂಗಳೂರು,ಅಕ್ಟೋಬರ್,18,2023(www.justkannada.in):  ಐಟಿ ದಾಳಿ ವೇಳೆ  ಗುತ್ತಿಗೆದಾರನ ಮನೆಯಲ್ಲಿ ಪತ್ತೆಯಾದ ಕೋಟ್ಯಾಂತರ ರೂ ಹಣ  ಕಾಂಗ್ರೆಸ್ ಗೆ ಸೇರಿದ್ದು ಎಂಬ ಬಿಜೆಪಿಯವರ ಆರೋಪಕ್ಕೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಬಿಜೆಪಿ ನಾಯಕರು ಸತ್ಯಹರಿಶ್ಚಂದ್ರ ತರಹ ಫೋಸ್​ ಕೊಡ್ತಾರೆ ಎಂದು ಬೆಂಗಳೂರಿನಲ್ಲಿ ಇಲಾಖೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ. ಬೆಂಗಳೂರಿನಲ್ಲಿ ನಡೆದ ಐಟಿ ದಾಳಿ ಸರ್ಕಾರಕ್ಕೆ ಲಿಂಕ್ ಮಾಡ್ತಿದ್ದಾರೆ ಅಷ್ಟೇ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗೆ ಲಿಂಕ್ ಮಾಡುತ್ತಿದ್ದಾರೆ  ಎಂದು ಕಿಡಿಕಾರಿದರು.

ಇದೇ ವೇಳೆ ನಳೀನ್ ಕುಮಾರ್ ಕಟೀಲ್ ವಿರುದ್ದ ವಾಗ್ದಾಳಿ ನಡೆಸಿದ ರಾಮಲಿಂಗರೆಡ್ಡಿ, ನಳೀನ್ ಕಟೀಲ್ ಸೀರಿಯಸ್ ರಾಜಕಾರಣಿ ಅಲ್ಲ. ಬಿಜೆಪಿಗೆ ಹೀನಾಯ ಸೋಲಾಗಿದ್ದೇ ಕಟೀಲ್ ಕಾಲದಲ್ಲಿ. ಅವರನ್ನು ಸೀರಿಯಸ್ ಆಗಿ ತೆಗೆದುಕೊಳ್ಳಬೇಕಿಲ್ಲ. ಅವರನ್ನು ಅವರ ಪಕ್ಷದವರೇ ಸೀರಿಯಸ್ ಆಗಿ ತೆಗೆದುಕೊಳ್ಳುತ್ತಿಲ್ಲ ಎಂದು ವ್ಯಂಗ್ಯವಾಡಿದರು.

Key words: Satyaharishchandra- BJP leaders  – Minister- Ramalingareddy