Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Crime ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆಗೆ ಆದೇಶಿಸಿದ  ಸುಪ್ರೀಂಕೋರ್ಟ್​

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆಗೆ ಆದೇಶಿಸಿದ  ಸುಪ್ರೀಂಕೋರ್ಟ್​

ನವದೆಹಲಿ, ಸೆಪ್ಟೆಂಬರ್,​​ 21,2026 (www.justkannada.in):  2012ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಮೀಪ ನಡೆದಿದ್ದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.

ದೇಶಾದ್ಯಂತ ಸದ್ದು ಮಾಡಿದ್ದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಹೊಸದಾಗಿ ತನಿಖೆಗೆ ಕೋರ್ಟ್​​ ಆದೇಶಿಸಿದ್ದು, 3 ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.SIR ವಿವಾದ: ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಸೌಜನ್ಯ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠ, ಹೊಸ ತಂಡದಿಂದ ಸ್ವತಂತ್ರವಾಗಿ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಸೂಚಿಸಿದೆ. ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸ ತನಿಖೆಯಲ್ಲಿ ಸೇರಿಸದಂತೆ ನಿರ್ದೇಶನ ನೀಡಿದೆ.   ಈ ಮೂಲಕ ದೇಶಾದ್ಯಂತ ಸದ್ದು ಮಾಡಿದ್ದ ಈ ಪ್ರಕರಣಕ್ಕೆ ಮತ್ತೆ ಮರುಜೀವ ಬಂದಿದೆ.Saujanya rape and murder case jk02

ಸಿಬಿಐ ತನಿಖೆಯಲ್ಲಿ ಲೋಪದೋಷಗಳಿದ್ದು, ನೈಜ ಆರೋಪಿಗಳನ್ನು ರಕ್ಷಿಸಲಾಗಿದೆ ಎಂದು ಆರೋಪಿಸಿ ಸೌಜನ್ಯಾ ತಾಯಿ ಕುಸುಮಾವತಿ ಅವರು ಮರುತನಿಖೆಗೆ ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿತ್ತು. ಹೀಗಾಗಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.

 

English Summary
Title

Supreme Court Orders Fresh SIT Reinvestigation in Sowjanya Case

Short Description
The Supreme Court of India has ordered a fresh SIT reinvestigation into the 2012 Sowjanya rape and murder case, slamming previous CBI probes as "poor" and "non-independent." The 17-year-old student was brutally killed in Dharmasthala, Karnataka. Following the 2023 acquittal of Santhosh Rao—whom the court ruled was falsely accused—the victim's mother fought a relentless legal battle for justice. Overturning a High Court dismissal, the Apex Court highlighted severe forensic lapses, including unexamined crime scene evidence. A Special Investigation Team must now submit a compliance report within three months, offering renewed hope for finding the real culprits after 14 years of legal gridlock.
Keywords
Saujanya rape and murder case, Supreme Court, orders, re-investigation.