Thursday, September 10, 2026

BDA Apartments

Home Crime ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ:  ಮರುತನಿಖೆಗೆ ಸಮ್ಮತಿಸಿದ ಸುಪ್ರೀಂಕೋರ್ಟ್

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ:  ಮರುತನಿಖೆಗೆ ಸಮ್ಮತಿಸಿದ ಸುಪ್ರೀಂಕೋರ್ಟ್

ನವದೆಹಲಿ,ಜುಲೈ,22,2026 (www.justkannada.in):  ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ಸುಪ್ರೀಂಕೋರ್ಟ್ ಸಮ್ಮತಿಸಿದೆ.

ಪ್ರಕರಣ ಸಂಬಂಧ  ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಒತ್ತಾಯಿಸಿ  ಸೌಜನ್ಯ ತಾಯಿ ಕುಸುಮಾವತಿ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇದೀಗ ಪ್ರಕರಣ ಮರು ತನಿಖೆಗೆ ಸಮ್ಮತಿಸಿದೆ.

ವಿಚಾರಣೆ ವೇಳೆ ಸಿಬಿಐಗೆ ಸುಪ್ರೀಂ ಕೋರ್ಟ್ ತರಾಟೆ ತೆಗೆದುಕೊಂಡಿತು.   ತನಿಖಾಧಿಕಾರಿ ಘಟನಾಸ್ಥಳಕ್ಕೆ ಯಾಕೆ ಹೋಗಿಲ್ಲವೆಂದು ಪ್ರಶ್ನಿಸಿತು. ಹದಿನಾಲ್ಕು ವರ್ಷ ಆಯಿತು. ಸರಿಯಾದ ತನಿಖೆಯಾಗಿಲ್ಲ. ಸಾಕ್ಷ್ಯಗಳಿಗೆ ಭದ್ರತೆ ಮಂದುವರಿಸಿ. ಆದೇಶ ಮಾಡಿದ ಬಳಿಕ ಮಧ್ಯಂತರ ವರದಿ ಕೇಳುತ್ತೇವೆ. ಎಸ್‌ಐಟಿ ರಚನೆಯ ಬಗ್ಗೆ ನಾವು ನಿರ್ಧರಿಸುತ್ತೇವೆ ಸುಪ್ರೀಂ ಕೋರ್ಟ್ ಹೇಳಿತು.

ಇನ್ನು ಯಾವ ರೀತಿ ತನಿಖೆ ಮಾಡಬೇಕು ಎನ್ನುವ ಬಗ್ಗೆ ಸುಪ್ರೀಂಕೋರ್ಟ್ ಆದೇಶ ಕಾಯ್ದಿರಿಸಿದೆ. ತನಿಖೆಗೆ ಎಸ್ ಐಟಿ ರಚನೆ ಮಾಡಲು ಸಿದ್ದ ಎಂದು ರಾಜ್ಯ ಸರ್ಕಾರ ತಿಳಿಸಿದೆ.  14 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ನಡೆದ ಅತ್ಯಾಚಾರ ಕೊಲೆ ಪ್ರಕರಣ ಇದಾಗಿದೆ.

Key words: Saujanya, rape and murder case, Supreme Court, Reinvestigation