ನಮ್ಮ ಪಕ್ಷ ಉಳಿಸುವ ಸಂಕಲ್ಪ: ನಾನೂ ಕೂಡ ಸಂಘಟನೆಯಲ್ಲಿ ಪಾಲ್ಗೊಳ್ಳುವೆ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ.

ಬೆಂಗಳೂರು,ಆಗಸ್ಟ್,28,2023(www.justkannada.in): ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ನಮ್ಮ ಪಕ್ಷ ಉಳಿಸುವ ಸಂಕಲ್ಪ ಮಾಡಿದ್ದೇನೆ. ಹೀಗಾಗಿ ನಾನೂ ಕೂಡ  ಪಕ್ಷದ ಸಂಘಟನೆಯಲ್ಲಿ ಪಾಲ್ಗೊಳ್ಳುವೆ ಎಂದು JDS ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ,  ಪಕ್ಷ ಸಂಘಟನೆಯ ದೃಷ್ಟಿಯಿಂದ ಹಲವು ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ನಮಗೆ ಯಾವ ಪಕ್ಷದ ಮೇಲೂ ದ್ವೇಷ ಇಲ್ಲ. ನಮ್ಮ ಪಕ್ಷ ಸಂಘಟನೆಗೊಳಿಸಿ ಉಳಿಸಬೇಕೆಂದು ಕೆಲಸ ಮಾಡುತ್ತಿದ್ದೇವೆ ಎಂದರು.

ಈ ದೇಶದ ರಾಜಕಾರಣ ಹೇಗೆ ನಡೆಯುತ್ತಿದೆ ಎಂದು ನನಗೆ ಗೊತ್ತಿದೆ. ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಜೆಡಿಎಸ್  ಕೋರ್ ಕಮಿಟಿ ಸದಸ್ಯರು ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ. ನಾನು ಕೂಡ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.

Key words: save -our party – participate – organization – Former PM-HD Deve Gowda.