ನಾಳೆಯಿಂದ ಶಾಲಾ-ಕಾಲೇಜು ಆರಂಭ ಹಿನ್ನೆಲೆ: ಕಾಲೇಜಿಗೆ ಭೇಟಿ ನೀಡಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪರಿಶೀಲನೆ…

ಬೆಂಗಳೂರು,ಡಿಸೆಂಬರ್,31,2020(www.justkannada.in):  ರಾಜ್ಯದಲ್ಲಿ  ನಾಳೆ(ಜನವರಿ 1)ಯಿಂದ ಶಾಲಾಕಾಲೇಜು, ವಿದ್ಯಾಗಮ ಆರಂಭವಾಗಲಿದ್ದು 8 ತಿಂಗಳ ಬಳಿಕ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳು ಶಾಲೆಗೆ ತೆರಳಲು ಅವಕಾಶ ನೀಡಲಾಗಿದೆ.jk-logo-justkannada-mysore

ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಬೆಂಗಳೂರಿನ ಬಸವನಗುಡಿಯಲ್ಲಿರುವ ಬಿಎಂಎಸ್ ಕಾಲೇಜಿಗೆ ಭೇಟಿ ನೀಡಿದರು.  ಈ ವೇಳೆ ಶಾಲಾರಂಭದ  ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.school-college-re-open-tomorrow-education-minister-suresh-kumar-visits-college

ನಾಳೆಯಿಂದ ಶಾಲಾಕಾಲೇಜುಗಳು ಆರಂಭವಾಗಲಿದ್ದು, ಮೊದಲನೇ ಹಂತದಲ್ಲಿ ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಾಗಿದೆ.  ಶಾಲೆಗೆ ಬರುವ ಮಕ್ಕಳಿಗೆ ಪೋಷಕರ ಒಪ್ಪಿಗೆ ಪತ್ರ ಕಡ್ಡಾಯಗೊಳಿಸಲಾಗಿದೆ.

Key words:  school-college –re open- tomorrow- Education Minister- Suresh Kumar -visits -college.