ರಾಜ್ಯದಲ್ಲಿ ಶಾಲೆಗಳ ಆರಂಭ ಕುರಿತು ಮಹತ್ವದ ಸಭೆ ಆರಂಭ…

ಬೆಂಗಳೂರು,ನವೆಂಬರ್,4,2020(www.justkannada.in):  ಕೊರೋನಾ ಮಹಾಮಾರಿ ಹರಡುತ್ತಿರುವ ನಡುವೆ ರಾಜ್ಯದಲ್ಲಿ ಶಾಲೆಗಳ ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲು ಇಂದು ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಮಹತ್ವದ ಸಭೆ ನಡೆಯುತ್ತಿದ್ದು ಸಭೆ ಆರಂಭವಾಗಿದೆ.jk-logo-justkannada-logo

ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಿವ ಸುರೇಶ್ ಕುಮಾರ್ ನೇತೃತ್ವದಲ್ಲಿ  ಸಭೆ ನಡೆಯುತ್ತಿದ್ದು ಶಿಕ್ಷಣ ಇಲಾಖೆ ಆಯುಕ್ತರು ಮತ್ತು ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ಶಾಲೆಗಳ ಆರಂಭ ಮಾಡುವ ಕುರಿತು ಅಧಿಕಾರಿಗಳ ಜತೆ ಸಚಿವ ಸುರೇಶ್ ಕುಮಾರ್ ಚರ್ಚಿಸಲಿದ್ದಾರೆ.school-popening-significant-meeting-state-minister-suresh-kumar

ಈಗಾಗಲೇ ಕಾಲೇಜುಗಳ ಆರಂಭಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ನವೆಂಬರ್ 17 ರಂದು ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನ ಆರಂಭಿಸಲು ನಿರ್ಧರಿಸಲಾಗಿದೆ. ಈ ಮಧ್ಯೆ ಶಾಲೆಗಳ ಆರಂಭ ಕುರಿತು ಚರ್ಚಿಸಿ ದಿನಾಂಕ ನಿಗದಿ ಮಾಡಲು ಇಂದು ಮಹತ್ವದ ಸಭೆ ನಡೆಯುತ್ತಿದೆ.

Key words: school- popening-significant -meeting –state- minister –suresh kumar