Sunday, October 4, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Crime ವಿದ್ಯಾರ್ಥಿಗಳಿಂದಲೇ ಶಾಲಾ ಪ್ರಿನ್ಸಿಪಾಲ್ ಹತ್ಯೆ

ವಿದ್ಯಾರ್ಥಿಗಳಿಂದಲೇ ಶಾಲಾ ಪ್ರಿನ್ಸಿಪಾಲ್ ಹತ್ಯೆ

ನಲ್ಗೊಂಡ,ಆಗಸ್ಟ್,20,2026 (www.justkannada.in): ತಂದೆ ತಾಯಿ ಮತ್ತು ಶಿಕ್ಷಕರನ್ನ ದೇವರ ಸಮಾನ ಎಂದು ಹೇಳುತ್ತಾರೆ. ಆದರೆ ವಿದ್ಯಾರ್ಥಿಗಳೇ ಕ್ಷುಲ್ಲಕ ಕಾರಣಕ್ಕೆ ಶಾಲೆಯ ಪ್ರಾಂಶುಪಾಲರೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ತೆಲಂಗಾಣದಲ್ಲಿ ನಲ್ಗೊಂಡ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಪ್ರಿನ್ಸಿಪಾಲ್ ರೂಪಾರೆಡ್ಡಿ ಎಂಬುವವರೇ 10ನೇ ತರಗತಿ ವಿದ್ಯಾರ್ಥಿಗಳಿಂದ ಹತ್ಯೆಯಾದವರು.

ಶಾಲೆಯಲ್ಲಿ ಓರ್ವ ವಿದ್ಯಾರ್ಥಿ ಬ್ಯಾಗ್ ನಲ್ಲಿ ಮೊಬೈಲ್ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಾಂಶುಪಾಲೆ ರೂಪಾರೆಡ್ಡಿ ಅವರು ವಿದ್ಯಾರ್ಥಿಯನ್ನು ಹಾಸ್ಟೆಲ್ ನಿಂದ ಹೊರಹಾಕಿದ್ದರು. ಹೀಗಾಗಿ ಪ್ರಿನ್ಸಿಪಾಲ್ ಮೇಲೆ ವಿದ್ಯಾರ್ಥಿಗೆ  ದ್ವೇಷ ಉಂಟಾಗಿದೆ.ವಿದ್ಯಾರ್ಥಿಗಳಿಂದಲೇ ಶಾಲಾ ಪ್ರಿನ್ಸಿಪಾಲ್ ಹತ್ಯೆ murder kill

ಇದೇ ದ್ವೇಷದಲ್ಲಿ ಇಬ್ಬರು ವಿದ್ಯಾರ್ಥಿಗಳು ಪ್ರಿನ್ಸಿಪಾಲ್ ರೂಪಾರೆಡ್ಡಿ ಮನೆಗೆ ನುಗ್ಗಿ ಚಾಕುವಿನಿಂದ 27 ಬಾರಿ ಇರಿದು ಕೊಲೆ ಮಾಡಿದ್ದಾರೆ. ಬಳಿಕ ಮನೆಯಲ್ಲಿದ್ದ 2 ಲಕ್ಷ ರೂ. ಹಣವನ್ನ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.ವಿದ್ಯಾರ್ಥಿಗಳಿಂದಲೇ ಶಾಲಾ ಪ್ರಿನ್ಸಿಪಾಲ್ ಹತ್ಯೆ jk02_new jk02 new

Key words: School principal, murdered, by, students