ಶಾಲಾ, ಪಿಯು ಕಾಲೇಜು ಆರಂಭ: ನಾಳೆ ಸಿಎಂ ಮಹತ್ವದ ಸಭೆ

ಬೆಂಗಳೂರು, ನವೆಂಬರ್ 22, 2020 (www.justkannada.in): ರಾಜ್ಯದಲ್ಲಿ ಶಾಲಾ, ಪಿಯು ಕಾಲೇಜುಗಳ ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಸಿಎಂ ಮಹತ್ವದ ಸಭೆ ನಡೆಸಲಿದ್ದಾರೆ.

ಶಾಲೆ ಮತ್ತು ಪಿಯು ಕಾಲೇಜು ಆರಂಭ ಕುರಿತು ಚರ್ಚೆ ಹಿನ್ನೆಲೆ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಆಯುಕ್ತ ಅನ್ಬುಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಈಗಾಗಲೇ ಇಲಾಖೆ ಆಯುಕ್ತರು ನೀಡಿರುವ ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಕೊರೊನಾ ಕಾರಣದಿಂದ ವಿದ್ಯಾರ್ಥಿಗಳ ಸುರಕ್ಷತೆಯ ಗುರುತರ ಜವಾಬ್ದಾರಿ ಶಿಕ್ಷಣ ಇಲಾಖೆ ಮೇಲಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು, ಶಿಕ್ಷಣ ತಜ್ಞರು ಸೇರಿದಂತೆ ಸಂಬಂಧಪಟ್ಟವರ ಸಲಹೆ ಪಡೆದು ಶಾಲೆ, ಪಿಯು ಕಾಲೇಜು ಆರಂಭದ ದಿನಾಂಕ ನಿಗದಿಮಾಡುವ ಸಾಧ್ಯತೆ ಇದೆ.