ಮೀನುಗಾರಿಕೆ ಉತ್ತೇಜನಕ್ಕೆ ಸೀ ಫುಡ್ ಪಾರ್ಕ್: ಮತ್ಸ್ಯಸಿರಿ ಯೋಜನೆ  ಜಾರಿ- ಬಜೆಟ್ ನಲ್ಲಿ ಘೋಷಣೆ.

ಬೆಂಗಳೂರು,ಫೆಬ್ರವರಿ,17,2023(www.justkannada.in): ರಾಜ್ಯದಲ್ಲಿ ಮೀನುಗಾರಿಕೆ ಉತ್ತೇಜನಕ್ಕೆ ಸೀ ಫುಡ್ ಪಾರ್ಕ್ ಸ್ಥಾಪಿಸುವುದಾಗಿ ಸಿಎಂ ಬಸವರಾಜ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

ಕಾರವಾರದ ಬಳಿ ಸೀ ಫುಡ್ ಪಾರ್ಕ್ ಸ್ಥಾಪನೆ ಮಾಡುವುದು. ಆಳ ಸಮುದ್ರ ಮೀನುಗಾರಿಕೆಗೆ ಮತ್ಸ್ಯಸಿರಿ ಎಂಬ ಯೋಜನೆ ಆರಂಭ ಮಾಡಲಾಗುವುದು, ಕೇಂದ್ರ ಸರ್ಕಾರದ ಮತ್ಸ್ಯ ಸಂಪದ ಯೋಜನೆ ಜತೆ ಸಮನ್ವಯಗೊಳಿಸಿ ಈ ಯೋಜನೆ ಜಾರಿ  ಮಾಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಸೀಮೆ ಎಣ್ಣೆ ಆಧಾರಿತ ದೋಣಿಗಳನ್ನು ಪೆಟ್ರೋಲ್ ದೋಣಿಗಳನ್ನಾಗಿ ಪರಿವರ್ತಿಸಲು​ 40 ಕೋಟಿ ರೂ. ಮೀಸಲಿಡಲಾಗುವುದು. ಪರಿವರ್ತನೆಯಾಗುವ ವರೆಗೂ ಸೀಮೆಎಣ್ಣೆ ಸಹಾಯಧನ ಮುಂದುವರಿಸಲಾಗುವುದು. ಉತ್ತಮ ತಳಿ ಮೀನುಮರಿ ದಾಸ್ತಾನಿಗೆ 20 ಕೋಟಿ ರೂ. ಮೀಸಲು ಎಂದು ಬಜೆಟ್ ನಲ್ಲಿ ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

Key words: Sea Food Park –promote- Fisheries-Announcement -Budget.