ಜೆಡಿಎಸ್ ಗೆ ಎಷ್ಟು ಸೀಟು ಅಂತಾ ಇನ್ನೂ ಅಂತಿಮವಾಗಿಲ್ಲ- ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ.

ಬೆಂಗಳೂರು,ಮಾರ್ಚ್,19,2024(www.justkannada.in): ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಸೀಟು ಹಂಚಿಕೆ ಕಸರತ್ತು ನಡೆಯುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ , ಜೆಡಿಎಸ್ ಗೆ ಎಷ್ಟು ಸೀಟು ಅಂತಾ ಇನ್ನೂ ಅಂತಿಮವಗಿಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ,  ಹೆಚ್.ಡಿ ಕುಮಾರಸ್ವಾಮಿ, ಹೆಚ್.ಡಿ ದೇವೇಗೌಡರ ಜೊತೆ ಚರ್ಚಿಸಿದ್ದೇನೆ. ರಾಷ್ಟ್ರೀಯ ನಾಯಕರು ಕೂಡ ಮಾತನಾಡಿದ್ದಾರೆ. ಶೀಘ್ರವೇ ಎಲ್ಲವೂ ಸರಿ ಹೋಗಲಿದೆ ಎಂದು ತಿಳಿಸಿದರು.

Key words: seats -JDS – not final – BJP -state president -BY Vijayendra.