ನಾಳೆ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ.

ಬೆಂಗಳೂರು,ಏಪ್ರಿಲ್,20,2023(www.justkannada.in):  ನಾಳೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ವೆಬ್ ಸೈಟ್ ನಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ.

9-03-2023ರಿಂದ 29-03-2023ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಸಲಾಗಿತ್ತು.  ನಾಳೆ ಬೆಳಿಗ್ಗೆ 10ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದ್ದು ಫಲಿತಾಂಶ ಪ್ರಕಟವಾಗಲಿದೆ.  ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಬೆಳಿಗ್ಗೆ 11 ಗಂಟೆಯ ನಂತ್ರ ವೀಕ್ಷಿಸಬಹುದಾಗಿದೆ.

Key words: Second -PU exam- result –will- announce- tomorrow.