ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ: ಹಿಜಾಬ್ ಧರಿಸಿ ಬಂದರೇ ಅವಕಾಶವಿಲ್ಲ-ಸಚಿವ ಬಿಸಿ ನಾಗೇಶ್.

ಬೆಂಗಳೂರು,ಮಾರ್ಚ್,8,2023(www.justkannada.in):  ನಾಳೆಯಿಂದ ಮಾರ್ಚ್ 29ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು,  ಹಿಜಾಬ್ ಧರಿಸಿ ಬಂದರೇ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ. ವಿದ್ಯಾರ್ಥಿಗಳಿಗೆ ಸಮವಸ್ತ್ರ ನಿಯಮ ಪಾಲನೆ ಕಡ್ಡಾಯ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದರು.

ಈ ಕುರಿತು ಇಂದು ಮಾತನಾಡಿದ ಸಚಿವ ಬಿಸಿ ನಾಗೇಶ್, ಕಳೆದ ವರ್ಷದ ನಿಯಮವೇ ಈ ಬಾರಿಯೂ ಜಾರಿಯಲ್ಲಿರುತ್ತದೆ. ಕಳೆದ ವರ್ಷ 6 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ನಿಯಮ ಪಾಲಿಸಿ ಪರೀಕ್ಷೆಗೆ ಹಾಜರಾಗಿ ಎಂದು ತಿಳಿಸಿದರು.

1,109 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳಿರುತ್ತವೆ. ಎಲ್ಲಾ ವಿಷಯಗಳಲ್ಲೂ 20 ಅಂಕಗಳಿಗೆ ಬಹುಆಯ್ಕೆ ಪ್ರಶ್ನೆಗಳಿರುತ್ತದೆ.  ಮಕ್ಕಳಿಗೆ ಅನುಕೂಲ ಆಗಲಿ ಅಂತಾ ಈ ವಿಧಾನ ಜಾರಿಗೆ ತರಲಾಗಿದೆ ಎಂದರು.

10.15ರಿಂದ 1.30ರವರೆಗೆ ಪರಿಕ್ಷೆ ನಡೆಯಲಿದೆ.  7,26,195 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿದ್ದಾರೆ.  5716 ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದ ಸುತ್ತಾ 200 ಮೀಟರ್ ವ್ಯಾಪ್ತಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ ಎಂದು ಬಿಸಿ ನಾಗೇಶ್ ಮಾಹಿತಿ ನೀಡಿದರು.

Key words: Second PU- exam-tomorrow-Minister – BC Nagesh.