ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಈ ಬಾರಿ 61.88ರಷ್ಟು ಮಕ್ಕಳು ಉತ್ತೀರ್ಣ.

ಬೆಂಗಳೂರು,ಜೂನ್,18,2022(www.justkannada.in): 2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿ 61.88ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ.

ಈ ಕುರಿತು ಪಿಯು ಬೋರ್ಡ್ ನಲ್ಲಿ ಸುದ‍್ಧಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್,  ಈ ಬಾರಿ 61.88ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಈ ವರ್ಷ 5,99,794 ಮಕ್ಕಳು  ಪರೀಕ್ಷೆ ಬರೆದಿದ್ದರು. ಈ ಪೈಕಿ 4,02,697  ಪಾಸ್ ಆಗಿದ್ದಾರೆ ಎಂದು ತಿಳಿಸಿದರು.

Key words: Second PU -Result -61.88 per cent – passed.