ದ್ವಿತೀಯ ಪಿಯು ಫಲಿತಾಂಶ;  ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ: ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ.

ಬೆಂಗಳೂರು,ಜೂನ್,18,2022(www.justkannada.in):  ಇಂದು 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ(ಶೇ.88.02) ಮೊದಲ ಸ್ಥಾನ ಪಡೆದುಕೊಂಡಿದೆ.

86.38 ರಷ್ಟು ಫಲಿತಾಂಶ ಪಡೆಯುವ ಮೂಲಕ ಉಡುಪಿ 2ನೇ ಸ್ಥಾನ ಪಡೆದುಕೊಂಡಿದೆ.  ವಿಜಯಪುರ 3ನೇ ಸ್ಥಾನ, ಬೆಂಗಳೂರು ದಕ್ಷಣ 4ನೇ ಸ್ಥಾನ, ಉತ್ತರ ಕನ್ನಡ 5ನೇ ಸ್ಥಾನ, ಚಿತ್ರದುರ್ಗ ಜಿಲ್ಲೆ (ಶೇ.49.31) ಕೊನೆಯ ಸ್ಥಾನ ಪಡೆದುಕೊಂಡಿದೆ.

ಎಂದಿನಂತೆ ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಹೆಚ್ಚು ಸೈನ್ಸ್ ವಿದ್ಯಾರ್ಥಿಗಳು ಪಾಸ್ ಆಗಿದ್ದು ವಿಜ್ಞಾನಾ ವಿಭಾಗದಲ್ಲಿ ಶೇ. 72. 53 ರಷ್ಟು ವಾಣಿಜ್ಯ ವಿಭಾಗದಲ್ಲಿ ಶೇ. 64.97 ರಷ್ಟು. ಕಲಾ ವಿಭಾಗದಲ್ಲಿ  58. 71 ರಷ್ಟು ಫಲಿತಾಂಶ ಬಂದಿದೆ.

ಕಳೆದ ಎಪ್ರಿಲ್ 23 ರಿಂದ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಈ ಪೈಕಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ದಾಖಲಾಗಿದ್ದರು. ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

Key words: Second PU-result-Daksha Kannada-first place