ದ್ವಿತೀಯ ಪಿಯು ಫಲಿತಾಂಶ: ರಾಜ್ಯಕ್ಕೆ ಇವರೇ ಟಾಪರ್ಸ್..

ಬೆಂಗಳೂರು,ಏಪ್ರಿಲ್,21,2023(www.justkannada.in):  ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಒಟ್ಟು 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪಿಯುಸಿ ಫಲಿತಾಂಶದಲ್ಲಿ ಮೊದಲ ಸ್ಥಾನದಲ್ಲಿದೆ.

ಈ ಮಧ್ಯೆ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ  ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದವರು ಇವರೇ ನೋಡಿ..

ಕಲಾ ವಿಭಾಗದಲ್ಲಿ ಬೆಂಗಳೂರಿನ ಜಯನಗರದ NMKRV ಕಾಲೇಜಿನ ವಿದ್ಯಾರ್ಥಿನಿ ತಬಸ್ಸುಮ್ 593 ಅಂಕಗಳೊಂದಿಗೆ ಕರ್ನಾಟಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮೂಡುಬಿದ್ರೆಯ ಆಳ್ವಾಸ್ ಕಾಲೇಜಿನ ಅನನ್ಯಾ 600ಕ್ಕೆ 600 ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ವಿಜ್ಞಾನ ವಿಭಾಗದಲ್ಲಿ ಕೋಲಾರದ ಗಂಗೋತ್ರಿ ಕಾಲೇಜಿನ ಕೌಶಿಕ್ 600ಕ್ಕೆ 596 ಅಂಕ ಪಡೆದು ಟಾಪರ್ ಆಗಿದ್ದಾರೆ.

9-03-2023ರಿಂದ 29-03-2023ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಸಲಾಗಿತ್ತು.  ಇಂದು ಫಲಿತಾಂಶ ಪ್ರಕಟವಾಗಿದೆ.

Key words: Second PU- Result:-These – toppers – state..