ಖಾಸಗಿ ಬಸ್ ಡಿಕ್ಕಿಯಾಗಿ ದ್ವಿತೀಯ ಪಿಯು ವಿದ್ಯಾರ್ಥಿನಿ ಸಾವು.

ಬೆಂಗಳೂರು,ಜುಲೈ,3,2023(www.justkannada.in): ತಂದೆ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿಯಾಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಜಾಲಹಳ್ಳಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ದಿಶಾ(18) ಮೃತಪಟ್ಟ ವಿದ್ಯಾರ್ಥಿನಿ. ಘಟನೆಯಲ್ಲಿ ತಂದೆ ಸತೀಶ್ ಪವಾಡ ಸದೃಶವಾಗಿ ಪಾರಾಗಿದ್ದಾರೆ. ಮೃತ  ದಿಶಾ  ಎಂಇಎಸ್ ಕಾಲೇಜಿನಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದು ಇಂದು ಬೈಕ್ ನಲ್ಲಿ ತಂದೆ ಜೊತೆ ತೆರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Key words: Second PU- student- dies -collision – private bus.