ಮಾರ್ಚ್ 9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್!

ಬೆಂಗಳೂರು, ಮಾರ್ಚ್ 05, 2023 (www.justkannada.in) ಮಾರ್ಚ್ 9 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ವಿಶೇಷ ಎಂದರೆ 2022-23 ಸಾಲಿನ ವಿದ್ಯಾರ್ಥಿಗಳಿಗೆ ಪಿಯು ಇಲಾಖೆ ಸಿಹಿ ಸುದ್ದಿ ನೀಡಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈಗಾಗಲೇ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ.

ಪ್ರತಿ ವರ್ಷ ದ್ವಿತೀಯ ಪಿಯುಸಿಯಲ್ಲಿ ಪಾಸಾದ ವಿದ್ಯಾರ್ಥಿಗಳ ಸಂಖ್ಯೆ ಶೇ 60% ಕ್ಕಿಂತ ಮೀರುತ್ತಿಲ್ಲ. ಹೀಗಾಗಿ ಫಲಿತಾಂಶವನ್ನು ಸುಧಾರಿಸುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ದ್ವಿತೀಯ ಪಿಯುಸಿ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಇಲಾಖೆ ಈ ಬಾರಿಯ ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆಯಲ್ಲಿ ಎಲ್ಲ ವಿಷಯಗಳಲ್ಲೂ 1 ಅಂಕದ 20 ಪ್ರಶ್ನೆಗಳನ್ನು ಕೇಳಿದೆ. ಪ್ರತಿ ವರ್ಷ 5 ಅಥವಾ 6 ಮಾತ್ರ ಪ್ರಶ್ನೆಗಳನ್ನು ಕೇಳಲಾಗುತ್ತಿತ್ತು.

ಆದರೆ ಈ ಬಾರಿ ಈ 20 ಪ್ರಶ್ನೆಗಳಲ್ಲಿ 12 ಬಹುಆಯ್ಕೆ ಪ್ರಶ್ನೆಗಳು (MCQ), ಕೆಲವು ಬಿಟ್ಟಸ್ಥಳ ತುಂಬಿರಿ ಮತ್ತು ಹೊಂದಿಸಿ ಬರೆಯಿರಿ ಇತ್ಯಾದಿ ಪ್ರಶ್ನೆಗಳನ್ನು ಕೇಳಿದೆ. ಈ ಬದಲಾವಣೆ ಹೊರತಾಗಿಯೂ ಪ್ರಶ್ನೆಪತ್ರಿಕೆ ಮಾದರಿ ಮೊದಲಿನಂತೆಯೇ ಉಳಿಯುತ್ತದೆ.