ಬೆಂಗಳೂರು,ಏಪ್ರಿಲ್,8,2026 (www.justkannada.in): ನಾಳೆ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ.
ನಾಳೆ ಉಪಚುನಾವಣೆ ಮತದಾನ ಹಿನ್ನೆಲೆಯಲ್ಲಿ ಸಂಜೆ 6.15ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗರಾಪ್ಪ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ ಎನ್ನಲಾಗಿತ್ತು.
ಆದರೆ ಇದೀಗ ಈ ಕುರಿತು ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ದಿನಾಂಕ 09-04-2026ರಂದು ಮಧ್ಯಾಹ್ನ 3.00 ಗಂಟೆಗೆ ಅಧಿಕೃತವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದೆ.
ಅಧಿಕೃತ ವೆಬ್‌ಸೈಟ್:https://karresults.nic.in ಲಿಂಕ್ ಮೂಲಕ ಫಲಿತಾಂಶ ವೀಕ್ಷಿಸಬಹುದು. ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ಮಂಡಲಿಯಿಂದಲೇ ವಾಟ್ಸಾಪ್ ಅಥವಾ ಎಸ್‌ಎಂಎಸ್ (SMS) ಮೂಲಕ ಫಲಿತಾಂಶದ ವಿವರಗಳನ್ನು ರವಾನಿಸಲಾಗುವುದು.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಂಡಲಿಯು ಈ ವರ್ಷ ಒಂದು ವಿಶೇಷ ಕ್ರಮವನ್ನು ಕೈಗೊಂಡಿದೆ. ಇದೇ ಮೊದಲ ಬಾರಿಗೆ ಫಲಿತಾಂಶದ ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕವೂ ಲಭ್ಯಗೊಳಿಸಲಾಗುತ್ತಿದೆ ಎಂದು ತಿಳಿಸಿದೆ.
Key words: Second PUC exam, results ,e announced, tomorrow, afternoon







