ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಈ ಬಾರಿ ಶೇ.74.67 ರಷ್ಟು ವಿದ್ಯಾರ್ಥಿಗಳು ಪಾಸ್: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ.

ಬೆಂಗಳೂರು,ಏಪ್ರಿಲ್,21,2023(www.justkannada.in):  ರಾಜ್ಯದಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.74.67 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕೆಎಸ್ ಇಇಬಿ ಅಧ್ಯಕ್ಷ ರಾಮಚಂದ್ರನ್ ಇಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.  ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದರೇ, ಯಾದಗಿರಿ ಕೊನೆಯ ಸ್ಥಾನದಲ್ಲಿದೆ.ಉಡುಪಿ ಜಿಲ್ಲೆಗೆ 2 ನೇ ಸ್ಥಾನ, ಕೊಡಗಿಗೆ 3ನೇ ಸ್ಥಾನ, ಉತ್ತರ ಕನ್ನಡ 4ನೇ ಸ್ಥಾನದಲ್ಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ 9ನೇ ಸ್ಥಾನದಲ್ಲಿದ್ದರೆ, ಬೆಂಗಳೂರು ದಕ್ಷಿಣ ಜಿಲ್ಲೆ 10ನೇ ಸ್ಥಾನದಲ್ಲಿದೆ. ಬೆಂಗಳೂರು ಉತ್ತರ ಜಿಲ್ಲೆ 11ನೇ ಸ್ಥಾನದಲ್ಲಿದೆ.  ಈ ಬಾರಿ ಶೇ.74.67 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಕಲಾ ವಿಭಾಗದ 1,34 876 ವಿದ್ಯಾರ್ಥಿಗಳು,  ವಿಜ್ಞಾನ ವಿಭಾಗದ 2,07,087 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.  ಕಲಾ ವಿಭಾಗದಲ್ಲಿ ಶೇ. 61.22 ರಷ್ಟು ಫಲಿತಾಂ,  ವಾಣಿಜ್ಯ ವಿಭಾಗದಲ್ಲಿ ಶೇ.75.89 ರಷ್ಟು ಫಲಿತಾಂಶ, ವಿಜ್ಞಾನ ವಿಭಾಗದಲ್ಲಿ ಶೇ. 85.71 ರಷ್ಟು ಫಲಿತಾಂಶ  ಬಂದಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ (KSEEB) ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪರಿಶೀಲಿಸಬಹುದು – karresults.nic.in.

Key words: Second PUC- Result- Announced: 74.67 percent –students- pass