Sunday, September 20, 2026

BDA Apartments

ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ BDA JK_Adv BDA Adv
Home Front Page ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

ಬೆಂಗಳೂರು,ಏಪ್ರಿಲ್ ,8,2025 (www.justkannada.in): ಇಂದು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ.

ಇಂದು ಮಧ್ಯಾಹ್ನ 12.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ  ದ್ವಿತೀಯ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಲಿದ್ದಾರೆ. ಪತ್ರಿಕಾಗೋಷ್ಠಿ ನಂತರ ಮಧ್ಯಾಹ್ನ 1.30ಕ್ಕೆ ಇಲಾಖೆ ವೆಬ್ ಸೈಟ್‌ನಲ್ಲಿ ಅಧಿಕೃತವಾಗಿ ರಿಸಲ್ಟ್ ಲಭ್ಯವಾಗಲಿದೆ.

ಮಾರ್ಚ್ 1 ರಿಂದ ಮಾರ್ಚ್ 20ರ ವರೆಗೆ ಪರೀಕ್ಷೆ ನಡೆದಿತ್ತು. ರಾಜ್ಯದ 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇಂದು ಈ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದ್ದು Karresults.nic.in ವೆಬ್ ಸೈಟ್‌ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

Key words: Second PUC,  exam, results, today