Sunday, September 27, 2026

BDA Apartments

ಭದ್ರತಾ ಲೋಪವೇ? ಸಿಎಂ ಹೆಲಿಪ್ಯಾಡ್‌ ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಲ್ಯಾಂಡಿ...
Home Front Page ಭದ್ರತಾ ಲೋಪವೇ? ಸಿಎಂ ಹೆಲಿಪ್ಯಾಡ್‌ ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಲ್ಯಾಂಡಿಂಗ್

ಭದ್ರತಾ ಲೋಪವೇ? ಸಿಎಂ ಹೆಲಿಪ್ಯಾಡ್‌ ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಲ್ಯಾಂಡಿಂಗ್

ರಾಯಚೂರು,ಫೆಬ್ರವರಿ,9,2026 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ಸಂದರ್ಭದಲ್ಲಿ ಗೊಂದಲ ಉಂಟಾದ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕಲಬುರಗಿ ರಸ್ತೆಯಲ್ಲಿ ನಡೆದಿದೆ.

ನಿಗದಿತ ಹೆಲಿಪ್ಯಾಡ್ ಬದಲಾಗಿ, ಸಚಿವ ಸತೀಶ್ ಜಾರಕಿಹೊಳಿ ಅವರು ಇಳಿಯಬೇಕಿದ್ದ ಹೆಲಿಪ್ಯಾಡ್‌ ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಹೆಲಿಕಾಪ್ಟರ್ ಲ್ಯಾಂಡ್ ಆಗಿದೆ. ಅದೇ ವೇಳೆ ಸಚಿವ ಸತೀಶ್ ಜಾರಕಿಹೊಳಿ ಅವರು ಸಿಎಂ ಇಳಿಯಬೇಕಿದ್ದ ಹೆಲಿಪ್ಯಾಡ್‌ ನಲ್ಲಿ ಲ್ಯಾಂಡ್ ಆಗಿದ್ದಾರೆ.

ಮೂಲ ಯೋಜನೆಯಂತೆ ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ರಾಯಚೂರು ರಸ್ತೆಯಲ್ಲಿ ಲ್ಯಾಂಡ್ ಆಗಬೇಕಾಗಿತ್ತು. ಆದರೆ ಅದು ಕಲಬುರಗಿ ರಸ್ತೆಯ ಹೆಲಿಪ್ಯಾಡ್‌ ನಲ್ಲಿ ಲ್ಯಾಂಡ್ ಆಗಿದ್ದು, ಕಾರ್ಯಕ್ರಮದ ವ್ಯವಸ್ಥೆಯಲ್ಲಿ ಗೊಂದಲ ಉಂಟಾಗಿದೆ.

ಗಂಭೀರ ಸಂಗತಿಯೆಂದರೆ, ಸಿಎಂ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಲು ಸ್ಥಳದಲ್ಲಿ ಕೇವಲ ಒಬ್ಬ ಅಧಿಕಾರಿ ಮಾತ್ರ ಹಾಜರಿದ್ದದ್ದು. ಈ ಹಿನ್ನೆಲೆಯಲ್ಲಿ ಸಿಎಂ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಭದ್ರತಾ ವೈಫಲ್ಯ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

ಘಟನೆಯ ಮಾಹಿತಿ ಪಡೆದ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ಲ್ಯಾಂಡಿಂಗ್ ಗೊಂದಲ ಹಾಗೂ ಭದ್ರತಾ ವ್ಯವಸ್ಥೆಯಲ್ಲಿನ ಲೋಪಗಳ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ.

Key words: Security lapse, Minister, Satish Jarkiholi, landing ,CM Siddaramaiah helipad